ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೆ ಸಿಎಂ ತೀರ್ಮಾನ

KannadaprabhaNewsNetwork |  
Published : Nov 17, 2025, 01:30 AM IST
೧೬ ವೈಎಲ್‌ಬಿ ೦೧ಯಲಬುರ್ಗಾ ತಾಲೂಕಿನ ಸಾಲಭಾವಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ವಾಲ್ಮೀಕಿ ನಾಯಕ ಸಮಾಜದ ಜನ ಜಾಗೃತಿ ಬೃಹತ್ ಸಮಾವೇಶವನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿದರು.೧೬ ವೈಎಲ್‌ಬಿ ೦೨ಯಲಬುರ್ಗಾ ತಾಲೂಕಿನ ಸಾಲಭಾವಿಯಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ನಾಯಕ ಸಮಾಜದ ಜನ ಜಾಗೃತಿ ಬೃಹತ್ ಸಮಾವೇಶದಲ್ಲಿ ಪಲ್ಗೊಂಡಿದ್ದ ಜನಸ್ತೋಮ | Kannada Prabha

ಸಾರಾಂಶ

ಬೆಂಗಳೂರಿನಲ್ಲಿ ಸಮಾಜಕ್ಕೆ ೩ ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಂದಿನ ಬಜೆಟ್‌ನಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ.

ಯಲಬುರ್ಗಾ: ನಮ್ಮ ಸರ್ಕಾರದ ಅವಧಿಯಲ್ಲಿ ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿವಿ ಎಂದು ನಾಮಕರಣ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ತಾಲೂಕಿನ ಸಾಲಭಾವಿ ಗ್ರಾಮದಲ್ಲಿ (ಗಂಡುಗಲಿ ಕುಮಾರರಾಮ ವೇದಿಕೆ) ವಾಲ್ಮೀಕಿ ನಾಯಕ ಮಹಾಸಭಾ ಯಲಬುರ್ಗಾ-ಕುಕನೂರು ತಾಲೂಕು ಘಟಕ ಹಾಗೂ ನೌಕರರ ಸಂಘದ ಸಹಯೋಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ನಾಯಕ ಸಮಾಜದ ಜನ ಜಾಗೃತಿ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನಲ್ಲಿ ಸಮಾಜಕ್ಕೆ ೩ ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಂದಿನ ಬಜೆಟ್‌ನಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ. ಶೋಷಿತರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ದೆಹಲಿಯಲ್ಲಿ ₹೩೦ ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅರ್ಧ ಎಕರೆ ಭೂಮಿ ಖರೀದಿಸಿ, ಐಎಎಸ್, ಐಪಿಎಸ್ ಅಧ್ಯಯನ ಮಾಡುವವರಿಗೆ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಇಲ್ಲಿ ಯಾರನ್ನೂ ಯಾರೂ ಬೆಳೆಸುವುದಿಲ್ಲ. ನಾಯಕರನ್ನು ನೋಡಿ ಬೆಳೆಯಬೇಕು. ಎಲ್ಲ ಸಮಾಜದವರ ಸಹಕಾರದಿಂದ ನಾಯಕರಾಗಲು ಸಾಧ್ಯ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೌರವಯುತವಾಗಿ ಕಾಣಬೇಕು. ಶಿಕ್ಷಣದಿಂದ ಸಶಕ್ತರಾಗುವ ಪ್ರಯತ್ನ ಮಾಡಬೇಕು. ಸರ್ಕಾರ ತಾತ್ಪೂರ್ತಿಕವಾಗಿ ಸೌಲಭ್ಯ ಒದಗಿಸುತ್ತದೆ. ಪರಿಪೂರ್ಣವಾಗಿ ಒದಗಿಸುವುದಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ನಮ್ಮ ಸಮಾಜದ ಸ್ವಾಮೀಜಿಗಳಿಗೆ ಬುದ್ಧಿ ಹೇಳುವುದು, ಅವರ ವಿರುದ್ಧ ಟೀಕೆ ಮಾಡುವುದು ನಿಲ್ಲಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ