ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳಮೀಸಲು ಜಾರಿಗೊಳಿಸಿದಿದ್ದರೆ ಸಿಎಂ ಮನೆಗೆ ಮುತ್ತಿಗೆ

KannadaprabhaNewsNetwork |  
Published : Oct 05, 2024, 01:31 AM ISTUpdated : Oct 05, 2024, 12:33 PM IST
ಚಿತ್ರದುರ್ಗ ಮೂರನೇ ಪುಟದ ಬಾಟಂ  | Kannada Prabha

ಸಾರಾಂಶ

ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲಾತಿ ಅನುಷ್ಠಾನಗೊಳಿಸಿ ಸಾಮಾಜಿಕ ನ್ಯಾಯ ಎತ್ತಿಹಿಡಿಯದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಪಾದಯಾತ್ರೆ ತೆರಳಿ ಮುತ್ತಿಗೆ ಹಾಕಲಾಗುವುದೆಂದು ಮಾದಿಗ ದಂಡೋರದ ಮುಖಂಡ ಪಾವಗಡ ಶ್ರೀರಾಮ್ ಎಚ್ಚರಿಸಿದರು.

 ಚಿತ್ರದುರ್ಗ  : ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲಾತಿ ಅನುಷ್ಠಾನಗೊಳಿಸಿ ಸಾಮಾಜಿಕ ನ್ಯಾಯ ಎತ್ತಿಹಿಡಿಯದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಪಾದಯಾತ್ರೆ ತೆರಳಿ ಮುತ್ತಿಗೆ ಹಾಕಲಾಗುವುದೆಂದು ಮಾದಿಗ ದಂಡೋರದ ಮುಖಂಡ ಪಾವಗಡ ಶ್ರೀರಾಮ್ ಎಚ್ಚರಿಸಿದರು.

ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಂದ ಹಿರಿಯೂರು ತಾಲೂಕಿನ ಪಟ್ರೆಹಳ್ಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಶುಕ್ರವಾರ ಚಿತ್ರದುರ್ಗಕ್ಕೆ ಆಗಮಿಸಿದ ವೇಳಿ ಒನಕೆ ಓಬವ್ವ ವೃತ್ತದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮೂವತ್ತು ವರ್ಷಗಳಿಂದ ಎಲ್ಲಾ ಪಕ್ಷಗಳು ಮಾದಿಗರಿಗೆ ಮೋಸ ಮಾಡಿಕೊಂಡು ಬರುತ್ತಿವೆ ಎಂದು ದೂರಿದರು.

ಒಳ ಮೀಸಲಾತಿ ಜಾರಿಗೊಳಿಸುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಎಲ್ಲಾ ಪಕ್ಷಗಳು ಮಾದಿಗರನ್ನು ಕೇವಲ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬದಲು ಪರಿಶಿಷ್ಟ ಜಾತಿಯಲ್ಲಿನ ಎಲ್ಲಾ ಉಪ ಜಾತಿಗಳ ಮೇಲೆ ನಿಜವಾಗಿಯೂ ಕಾಳಜಿಯಿದ್ದರೆ ಮೊದಲು ಒಳ ಮೀಸಲಾತಿಯನ್ನು ಜಾರಿಗೊಳಿಸಿ ದಲಿತ ವಿರೋಧಿಯಲ್ಲ ಎನ್ನುವುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಮಠದಿಂದ 2003 ರಲ್ಲಿ ಒಳ ಮೀಸಲಾತಿಗಾಗಿ ಮೊದಲು ಪಾದಯಾತ್ರೆ ಆರಂಭವಾಯಿತು. ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳು ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ. ನಮ್ಮ ನಮ್ಮಲ್ಲೆ ಒಡಕು ಮೂಡಿಸುವ ದುರಾಲೋಚನೆಯಿಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನಖರ್ಗೆಯವರ ಕಡೆ ಕೈತೋರಿಸುತ್ತಿರುವುದು ಯಾವ ನ್ಯಾಯ? ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮೀಸಲಾತಿಯನ್ನು ಕೊಟ್ಟಿದ್ದರೂ ಸಮಪಾಲು ಹಂಚಿಕೆಯಾಗಿಲ್ಲ.

 ದಲಿತರನ್ನು ಕೇವಲ ಮತ ಬ್ಯಾಂಕನ್ನಾಗಿ ಬಳಸಿಕೊಳ್ಳುವುದನ್ನು ಬಿಟ್ಟು ಒಳ ಮೀಸಲಾತಿ ಜಾರಿಗೊಳಿಸಿ. ಇಲ್ಲವಾದಲ್ಲಿ ಕುರ್ಚಿ ಖಾಲಿ ಮಾಡಿ ಎಂದು ಪಾವಗಡ ಶ್ರೀರಾಮ್ ಹೇಳಿದರು.ಸಾಮಾಜಿಕ ನ್ಯಾಯ, ಭದ್ರತೆ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ದಲಿತ ವಿರೋಧಿ ಎನ್ನುವ ಕಳಂಕ ಅಂಟಿಸಿಕೊಳ್ಳಬೇಡಿ. ಸುಪ್ರೀಂಕೋರ್ಟ್ ತೀರ್ಪಿನನ್ವಯ ಮೊದಲು ಒಳ ಮೀಸಲಾತಿ ಜಾರಿಗೊಳಿಸಿ. ಇಲ್ಲವಾದಲ್ಲಿ ನಿಮ್ಮ ನಿವಾಸಕ್ಕೂ ಮುತ್ತಿಗೆ ಹಾಕುತ್ತೇವೆಂದು ಬೆದರಿಕೆ ಹಾಕಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ.ಪ್ರಕಾಶ್‍ಮೂರ್ತಿ, ಗುರುಸ್ವಾಮಿ, ಹುಲ್ಲೂರು ಕುಮಾರಸ್ವಾಮಿ, ಹರಿರಾಮ್, ಲಕ್ಷ್ಮಿ, ಕೋಡಿಹಳ್ಳಿ ಸಂತೋಷ್, ಕೆ.ಟಿ ಶಿವಕುಮಾರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌