ಕನ್ನಡಪ್ರಭ ವಾರ್ತೆ ಔರಾದ್
ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣ ಸ್ಪಂದಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
‘ಕನ್ನಡಪ್ರಭ’ ಜೂನ್ 9 ರಂದು ಭಯದ ನೆರಳಲ್ಲಿಯೇ ಮಕ್ಕಳಿಗೆ ನಿತ್ಯ ಪಾಠ ಎಂಬ ಶಿರ್ಷಿಕೆಯಲ್ಲಿ ಪ್ರಕಟಗೊಂಡ ವರದಿಗೆ ಸ್ಪಂದಿಸಿ ಜಿರ್ಗಾ (ಬಿ) ಶಾಲೆ ಕಟ್ಟಡದ ಸ್ಥಿತಿಗತಿ ಮಾಹಿತಿ ಕೇಳಿದಾರೆ.ಅದರಂತೆ ಪರಿಶೀಲನೆ ನಡೆಸಿದ್ದು, ಸದರಿ ಶಾಲೆಯಲ್ಲಿ 4 ಕೊಠಡಿಗಳಿದ್ದು, 37 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಶಾಲೆಯ 3 ಕೊಠಡಿಗಳು ಶಿಥಿಲಗೊಂಡಿವೆ. ಮಕ್ಕಳ ಹಿತದೃಷ್ಟಿಯಿಂದ ಮುಖ್ಯೋಪಾಧ್ಯಾಯರ ಕೋಣೆಯಲ್ಲಿ ಮಕ್ಕಳನ್ನು ಕೂಡಿಸಿ ಪಾಠ ಬೋಧನೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಸದರಿ ಶಾಲೆಗೆ ಕೆಕೆಆರ್‌ಡಿಬಿ ಯೋಜನೆಯಡಿ ₹12 ಲಕ್ಷ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭವಾಗಬೇಕಿದೆ ಎಂದು ಔರಾದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಲಿಖಿತ ರೂಪದಲ್ಲಿ ಸ್ಪಷ್ಟನೆ ನೀಡಿದ್ದಾರೆ.