ಅಬಕಾರಿ ಹಗರಣ ಬಗ್ಗೆ ಸಿಎಂ ಮೌನ ಸಂದೇಹಾಸ್ಪದ: ಪ್ರತಾಪ್‌ಸಿಂಹ ನಾಯಕ್‌

KannadaprabhaNewsNetwork |  
Published : Feb 10, 2026, 02:45 AM IST
09ಸಿಂಹ | Kannada Prabha

ಸಾರಾಂಶ

6 ಸಾವಿರ ಕೋಟಿ ರು.ಗೂ ಅಧಿಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸ್ವತಃ ಮದ್ಯ ಮಾರಾಟಗಾರರೇ ಬಹಿರಂಗವಾಗಿ ಆರೋಪಿಸಿದ್ದಾರೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನ ವಹಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕರ್ನಾಟಕ ಸರ್ಕಾರ ಕಾಂಗ್ರೆಸ್ ಹೈಕಮಾಂಡ್‌ಗೆ ಎಂಟಿಎಂ ಆಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಪ್ರತಾಪ್​ ಸಿಂಹ ನಾಯಕ್​ ಆರೋಪಿಸಿದ್ದಾರೆ.

ಉಡುಪಿ: 6 ಸಾವಿರ ಕೋಟಿ ರು.ಗೂ ಅಧಿಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸ್ವತಃ ಮದ್ಯ ಮಾರಾಟಗಾರರೇ ಬಹಿರಂಗವಾಗಿ ಆರೋಪಿಸಿದ್ದಾರೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನ ವಹಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕರ್ನಾಟಕ ಸರ್ಕಾರ ಕಾಂಗ್ರೆಸ್ ಹೈಕಮಾಂಡ್‌ಗೆ ಎಂಟಿಎಂ ಆಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಪ್ರತಾಪ್​ ಸಿಂಹ ನಾಯಕ್​ ಆರೋಪಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈತಿಕತೆ ಇದ್ದರೆ ಅಬಕಾರಿ ಇಲಾಖೆ ಸಚಿವ ಆರ್​.ಬಿ. ತಿಮ್ಮಾಪುರ ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇಷ್ಟು ದೊಡ್ಡ ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವರನ್ನು ಸಂಪುಟದಿಂದ ಕೈಬಿಡಲು ಹಿಂದೇಟು ಹಾಕುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಕೈಗನ್ನಡಿಯಾಗಿದೆ. ರಾಜ್ಯಯದಲ್ಲಿ ಅಭಿವೃದ್ಧಿ ಸ್ಥಗಿತವಾಗಿದೆ. ಜನರ ಸಮಸ್ಯೆ ಬಗ್ಗೆ ಚರ್ಚೆಗೆ ಅವಕಾಶವಿಲ್ಲದೆ ಅಧಿವೇಶನ ಮುಗಿದಿದೆ. ಹೀಗಾಗಿ ಜನತಾ ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸುತ್ತೇವೆ ಎಂದರು. ಕಳೆದ 20 ವರ್ಷದಲ್ಲಿ ನರೇಗಾ ಯೋಜನೆಯಲ್ಲಿ ಹಳ್ಳಿಗಳಿಗೆ 10 ಲಕ್ಷ ಕೋಟಿ ರು. ವ್ಯಯಿಸಲಾಗಿದೆ. ಆದರೆ ಅದರಿಂದ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಈ ರೀತಿ ಹಣ ದುರುಪಯೋಗ ತಡೆಗಾಗಿ ವಿಬಿ ಜಿ ರಾಮ್​ ಜಿ ಕಾಯ್ದೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್‍ಯದರ್ಶಿ ಶ್ರೀಕಾಂತ್​ ನಾಯಕ್​, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಾಪು, ಜಿಲ್ಲಾ ಕಾರ್‍ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಮತ್ತು ಶಿವಕುಮಾರ್​ ಅಂಬಲಪಾಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

80 ಶಾಸಕರ ಬೆಂಬಲ ಇದೆ ಎಂಬುದು ಪ್ರಶ್ನೆಯಲ್ಲ: ಸತೀಶ್‌
ನಮ್ಮ ಪ್ರಚೋದಿಸಬೇಡಿ- ಡಿಕೆ ಸಿಎಂ ಮಾಡಿ ಅಂತ 90 ಶಾಸಕರು ಕೇಳಿದ್ದೇವೆ : ಯತೀಂದ್ರಗೆ ಇಕ್ಬಾಲ್‌