ಕನ್ನಡಪ್ರಭ ವಾರ್ತೆ ತುಮಕೂರು
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರ ಸರ್ಕಾರಿ ರಜೆ ಘೋಷಿಸಬೇಕೆಂಬ ಪ್ರತಿಪಕ್ಷ ನಾಯಕರ ಆಗ್ರಹವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ರಜೆ ಘೋಷಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳು ಸೋಮವಾರದಂದು ಸರ್ಕಾರಿ ರಜೆ ಘೋಷಿಸಿದ್ದು, ಕರ್ನಾಟಕದಲ್ಲೂ ಇದೇ ರೀತಿ ಸರ್ಕಾರಿ ರಜೆ ಘೋಷಿಸಬೇಕೆಂಬ ಆಗ್ರಹ ಪ್ರತಿಪಕ್ಷಗಳಿಂದ ಕೇಳಿಬಂದಿತ್ತು.
ಈ ಕುರಿತ ಸುದ್ದಿಗಾರರ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ.
ಆದರೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ಪಾನಕ-ಫಲಾಹಾರ ವ್ಯವಸ್ಥೆಯ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ಬೆಂಗಳೂರಿನ ಮಹದೇವಪುರದಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವೊಂದರ ಉದ್ಘಾಟನೆಗೆ ತಮಗೆ ಆಹ್ವಾನ ಬಂದಿದ್ದು, ಸೋಮವಾರ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಇದೇ ವೇಳೆ ಮುಖ್ಯಮಂತ್ರಿ ಮಾಹಿತಿ ನೀಡಿದರು. ಹಿಮಾಚಲ ಕಾಂಗ್ರೆಸ್ ಸರ್ಕಾರದಿಂದ ರಜೆ ಘೋಷಣೆ