ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಪಟ್ಟಣದ ಬಸ್ತೀಪುರ ಗ್ರಾಮದ ಸಿದ್ದಪ್ಪಾಜಿ ದೇವಸ್ಥಾನದ ಆವರಣದಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಯೋಜಿಸಿದ್ದ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಮತ್ತು ಫಲಾನುಭವಿಗಳ ಸಂವಾದ ಕುರಿತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೆ ಹಲವಾರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಾನು ಪರಾಭವಗೊಂಡು ವನವಾಸದಲ್ಲಿದ್ದಾಗ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವ ಮೂಲಕ ನನ್ನ ಗೆಲುವಿಗೆ ಕಾರಣೀಭೂತರಾಗಿ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಅನೇಕ ಚುನಾವಣೆಗಳನ್ನು ಎದುರಿಸಿದ್ದೇನೆ, 1994 ಮತ್ತು 1999ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಶಾಸಕನಾಗಿದ್ದೆ. ಅಂದಿನ ಚುನಾವಣೆ ವೇಳೆ ವಾಟಾಳ್ ನಾಗರಾಜು, ಎಚ್. ಎಸ್. ಮಹದೇವಪ್ರಸಾದ್ , ಜಯಣ್ಣ ಮತ್ತು ಎಚ್. ನಾಗಪ್ಪ ಅವರೂ ಆಯ್ಕೆಯಾಗಿದ್ದರು. ಅಂದು ಮೈಸೂರಿನ 16 ವಿಧಾನಸಭಾ ಕ್ಷೇತ್ರಗಳ ಪೈಕಿ ರಾಜೀನಾಮೆ ಸ್ಥಾನ ಪಲ್ಲಟದಿಂದಾಗಿ ನಾನು ಮತ್ತು ಮಹದೇವಪ್ರಸಾದ್ ಅವರು ಮಾತ್ರ ಗೆದ್ದೆವು , ಆದರೆ ನಂತರದ ಚುನಾವಣೆಗಳಲ್ಲಿ ಸೋಲುತ್ತಲೇ ಬಂದ ನನಗೆ ರಾಜಕೀಯವಾಗಿ ಸಿದ್ದರಾಮಯ್ಯ ಕೈಹಿಡಿದರು ಎಂದರು.
ರಾಜ್ಯದ ಜನರಿಗೆ ಪಂಚ ಗ್ಯಾರಂಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ನುಡಿದಂತೆ ನಡೆದಿದ್ದಾರೆ, ಕಳೆದ ಬಾರಿಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ನೀಡಿದ್ದರು. ಈ ಅನುದಾನವನ್ನು ಎಲ್ಲಾ ಧರ್ಮ, ವರ್ಗದವರ ಸಮುದಾಯಗಳ ಅಭಿವೃದ್ಧಿಗೆ ನೀಡಿದ್ದೇನೆ, ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ 50 ಕೋಟಿ ರು. ಅನುದಾನ ಮಂಜೂರು ಮಾಡಿದ್ದು, ಈ ಅನುದಾನವನ್ನು ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಬಡವರ , ಹಿಂದುಳಿದವರ ಪರವಿದೆ ಎಂದರು.
----------
- ಎ .ಆರ್. ಕೃಷ್ಣಮೂರ್ತಿ, ಶಾಸಕರು