ಕನ್ನಡಪ್ರಭ ವಾರ್ತೆ ಸಿಂದಗಿ:
ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪ್ರತಿಭಟನೆಯ ಚಳುವಳಿಗಾರರ ಮೇಲೆ ಸರ್ಕಾರ ಮಾಡಿದ ಮಾರಣಾಂತಿಕ ಹಲ್ಲೆ ಖಂಡಿಸಿ ತಾಲೂಕು ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ ಮಾತನಾಡಿ, ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ೨ ಎ ಮೀಸಲಾತಿ ಪ್ರತಿಭಟನೆ ವೇಳೆ ಪೊಲೀಸರು ದುರುದ್ದೇಶದಿಂದ ಲಾಠಿಚಾರ್ಜ್ ನೆಪದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರ. ಘಟನೆಯಲ್ಲಿ ಹಲವಾರು ಜನರಿಗೆ ಗಂಭೀರ ಗಾಯಗಳಾಗಿವೆ. ಪೊಲೀಸರ ಮಾರಣಾಂತಿಕ ಹಲ್ಲೆಯನ್ನು ಸಮಸ್ತ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ ತೀವ್ರವಾಗಿ ಖಂಡಿಸುತ್ತದೆ. ಲಿಂಗಾಯತರ ಹೋರಾಟ ಹತ್ತಿಕ್ಕುವ ಹುನ್ನಾರದ ರೂವಾರಿ ಸಿಎಂ ಸಿದ್ದರಾಮಯ್ಯನವರೇ ಆಗಿದ್ದಾರೆ. ಈ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯದ ವಕೀಲರ ಮೇಲೆ ಹಾಗೂ ರೈತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಸರ್ಕಾರದ ಧೋರಣೆ ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸಿ ಹಕ್ಕು ಕೇಳುವುದು ಪ್ರತಿಯೊಬ್ಬರ ಕರ್ತವ್ಯ ಅದು ಜನ ವಿರೋಧಿ ಎಂದು ಹೇಳಿಕೆ ನೀಡಿದ್ದು ಖಂಡಿನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು,ವಕೀಲರು ದಾನಪ್ಪಗೌಡ ಚನ್ನಗೊಂಡ ಮಾತನಾಡಿ, ಸಿಎಂ ಸಿದ್ದರಾಮಯ್ಯ ಜನವಿರೋಧಿ ಹೇಳಿಕೆ ನೀಡಿದ್ದು ಖೇದಕರ ಸಂಗತಿ. ಲಾಠಿ ಹಿಡಿದುಕೊಂಡು ಸ್ವ ಹಿತಾಸಕ್ತಿ ತೋರಿ ಪಂಚಮಸಾಲಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಆರ್.ಹಿತೇಂದ್ರ ಅವರನ್ನು ಕೂಡಲೇ ಸೇವೆಯಿಂದ ವಜಾ ಗೊಳಿಸಬೇಕು. ಈ ಗೂಂಡಾವರ್ತನೆ ಸರ್ಕಾರ ಮತ್ತು ಸಿದ್ದರಾಮಯ್ಯನವರು ಮುಂದುವರೆಯಲು ಅನರ್ಹರು. ಈ ಇಬ್ಬರನ್ನು ಕೂಡಲೇ ವಜಾಗೊಳಿಸಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ. ಕೂಡಲೇ ಮುಖ್ಯಮಂತ್ರಿಗಳು ಸಮಾಜದ ಹಾಗೂ ಜಗದ್ಗುರುಗಳ ಕ್ಷಮೆ ಕೇಳಬೇಕು. ಈ ಕುತಂತ್ರ ರಾಜಕಾರಣಕ್ಕೆ ಕಡಿವಾಣ ಹಾಕಬೇಕು. ಅಲ್ಲದೆ ಪಂಚಮಸಾಲಿಗಳ ಹಾಗೂ ರೈತರ ಮೇಲೆ ಹಾಕಿರುವ ಕೇಸ್ ಅನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಡಾ.ಮುತ್ತು ಮನಗೂಳಿ, ಗೋಲ್ಲಾಳಪ್ಪಗೌಡ ಪಾಟೀಲ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಚಂದ್ರಶೇಖರ ನಾಗರಬೆಟ್ಟ, ಆನಂದ ಶಾಬಾದಿ, ಶ್ರೀಶೈಲ ಯಳಮೇಲಿ, ಬಸವರಾಜ ಐರೋಡಗಿ, ಶ್ರೀಶೈಲ ಚಳ್ಳಗಿ, ಅಶೋಕ ಅಲ್ಲಾಪೂರ, ಮಲ್ಲು ಅಲ್ಲಾಪುರ, ಹರ್ಷವರ್ಧನ ಪೂಜಾರಿ, ಸಂಗಣ್ಣ ಪಾಟೀಲ ಯಂಕಂಚಿ, ಶಿವರಾಜ ಪಾಟೀಲ, ಪ್ರವೀಣ ಬಿರಾದಾರ ಅಂತರಗಂಗಿ, ರಮೇಶ ಬಿರಾದಾರ, ರಾಮು ಯಳಮೇಲಿ, ಸುರೇಶ ಮಲಗೊಂಡ, ಶಿವು ಬಡಾನೂರ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.