ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ

KannadaprabhaNewsNetwork |  
Published : Nov 24, 2025, 01:15 AM IST
ಸಿಎಂ ಸಿದ್ದರಾಮಯ್ಯ | Kannada Prabha

ಸಾರಾಂಶ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ವಿದ್ಯುತ್ ಮತ್ತು ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಭಾಗವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಎಚ್.ಎನ್. ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ನವೆಂಬರ್ 24 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕಸಬಾ ಹೋಬಳಿಯ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ವಿದ್ಯುತ್ ಮತ್ತು ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ವಹಿಸಲಿದ್ದಾರೆ. ಗೌರವ ಉಪಸ್ಥಿತಿಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸಕ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಮುಖ್ಯ ಅತಿಥಿಗಳಾಗಿ ಮುಖ್ಯ ಅತಿಥಿಗಳಾಗಿ ಸಂಸದ ಡಾ. ಕೆ.ಸುಧಾಕರ್, ಎಂ.ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಪ್ರದೀಪ್ ಈಶ್ವರ್ , ಕೆ.ಎಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಸದಸ್ಯರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಎಚ್.ನರಸಿಂಹಯ್ಯ ಹಾಗೂ ಹಲವು ನಿಗಮ- ಮಂಡಳಿ, ಸಂಘ, ಸಂಸ್ಥೆಗಳ ಅಧ್ಯಕ್ಷರು, ಮುಖಂಡರು ಭಾಗವಹಿಸಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ