ಸೆಪ್ಟಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಶಿರಾಕ್ಕೆ

KannadaprabhaNewsNetwork |  
Published : Aug 04, 2025, 11:45 PM IST
೪ಶಿರಾ೧: ಶಿರಾ ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನವೀಕರಿಸಿದ ಶಾಸಕರ ಕೊಠಡಿಯನ್ನು ಶಾಸಕ ಟಿ.ಬಿ.ಜಯಚಂದ್ರ ಉದ್ಘಾಟಿಸಿದರು. ನಗರ ಸಭೆ ಅಧ್ಯಕ್ಷ ಜೀಶನ್ ಮೊಹಮ್ಮದ್, ಉಪಾಧ್ಯಕ್ಷ ಲಕ್ಷ್ಮೀಕಾಂತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರೀಶ್ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಸೋಮವಾರ ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನವೀಕರಿಸಿದ ಶಾಸಕರ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು

ಕನ್ನಡಪ್ರಭ ವಾರ್ತೆ ಶಿರಾ ಮುಂಬರುವ ಸೆಪ್ಟಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿರಾ ಕ್ಷೇತ್ರಕ್ಕೆ ಭೇಟಿ ಕೊಡುವುದರಿಂದ ನಾವು ಕಾರ್ಯಪ್ರವೃತ್ತರಾಗಬೇಕಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಯಬಾರದು. ಅರ್ಹ ಫಲಾನುಭವಿಗಳಿಗೆ ಮಾತ್ರ ನಿವೇಶನ ಸಿಗಬೇಕು ಎಂದು ಕರ್ನಾಟಕ ಸರಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದರು.ಅವರು ಸೋಮವಾರ ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನವೀಕರಿಸಿದ ಶಾಸಕರ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು. ಶಿರಾ ನಗರ ಸೇರಿದಂತೆ ತಾಲೂಕಿನ ನಿವೇಶನ ರಹಿತ ಬಡ ಕುಟುಂಬಗಳಿಗೆ ಸುಮಾರು ೧೦ ರಿಂದ ೧೫ ಸಾವಿರ ನಿವೇಶನಗಳನ್ನು ಹಂಚಲು ನಿರ್ಧರಿಸಿದ್ದು, ಇದಕ್ಕಾಗಿ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಬೇಕಿದೆ. ಈಗಾಗಲೇ ಎರಡು ವರ್ಷ ಅಧಿಕಾರವನ್ನು ನಾವು ಪೂರೈಸಿದ್ದೇವೆ. ೨ ವರ್ಷದ ಅವಧಿಯಲ್ಲಿ ನಾವು ಕೈಗೊಂಡ ಕಾರ್ಯಗಳು ಹಾಗೂ ಮುಂದೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಅಧಿಕಾರಿಗಳೊಡನೆ ಚರ್ಚಿಸಲಿದ್ದೇವೆ. ತಾಲೂಕಿನಲ್ಲಿ ಈ ಬಾರಿ ನಿರೀಕ್ಷಿಸಿದ ಮಟ್ಟದಲ್ಲಿ ಮಳೆಯಾಗಲಿಲ್ಲ, ಆದರೂ ಕೂಡ ಕಳೆದ ಒಂದು ತಿಂಗಳಿಂದ ನಮ್ಮ ಕೆರೆಗೆ ಹೇಮಾವತಿ ನೀರು ಹರಿದಿದೆ, ಕೆರೆ ತುಂಬಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಮಳೆ ಬರುವ ನಿರೀಕ್ಷೆ ಇದ್ದು ಎಲ್ಲಾ ಕೆರೆಗಳು ತುಂಬುವ ಭರವಸೆ ಇದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷ ಜೀಶನ್ ಮೊಹಮ್ಮದ್, ಉಪಾಧ್ಯಕ್ಷ ಲಕ್ಷ್ಮೀಕಾಂತ್, ಪೌರಾಯುಕ್ತ ರುದ್ರೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರೀಶ್, ಸಹಾಯಕ ಕೃಷಿ ನಿರ್ದೇಶಕ ಎಚ್.ನಾಗರಾಜು, ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ನಟರಾಜ್, ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಅಜಯ್ ಕುಮಾರ್, ಸೂಡಾ ಸದಸ್ಯ ಲಕ್ಕನಹಳ್ಳಿ ಶ್ರೀನಿವಾಸ್, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಣಿಕಂಠ, ನಗರ ಅಧ್ಯಕ್ಷ ಅಂಜನ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಹೇಮಂತ್ ಗೌಡ, ನಗರಸಭೆ ಸದಸ್ಯರುಗಳಾದ ಶಂಕರಪ್ಪ, ಬಿ.ಎಂ.ರಾಧಾಕೃಷ್ಣ, ಮುಖಂಡರುಗಳಾದ ಶೋಭಾ ನಾಗರಾಜ್, ಲಕ್ಷ್ಮಿದೇವಮ್ಮ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ