ಶೈಕ್ಷಣಿಕ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೊಡುಗೆ ಮಹತ್ವದ್ದು

KannadaprabhaNewsNetwork |  
Published : Jun 10, 2025, 02:06 AM IST
ಪೋಟೊ ಕ್ಯಾಪ್ಸನ್:ಡಂಬಳ ಹೋಬಳಿಯ ಮೇವುಂಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗದಗಇವರ ಸಂಯುಕ್ತ ಆಶ್ರಯದಲ್ಲಿ  ₹8 ಕೋಟಿ 65 ಲಕ್ಷ   ಅನುದಾನದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಭೂಮಿ ಪೂಜೆ ನೆರವೇರಿಸಿದ ಶಾಸಕ ಜಿ.ಎಸ್.ಪಾಟೀಲ. ಗ್ರಾಪಂ ಅಧ್ಯಕ್ಷೆ ದುರಗಮ್ಮ ತಳಗೇರಿ, ಡಿ.ಡಿ.ಮೋರನಾಳ, ಗೋಣಿಬಸಪ್ಪ ಕೊರ್ಲಹಳ್ಳಿ ಗ್ರಾಮಸ್ಥರು ಇದ್ದರು. | Kannada Prabha

ಸಾರಾಂಶ

ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಉತ್ತಮ ವೇದಿಕೆಯಾಗುವಂತೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ರೋಣ ಮತ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.

ಡಂಬಳ: ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಉತ್ತಮ ವೇದಿಕೆಯಾಗುವಂತೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ರೋಣ ಮತ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.

ಡಂಬಳ ಹೋಬಳಿಯ ಮೇವುಂಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ₹ 8.65 ಕೋಟಿ ಅನುದಾನದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈಗ ಸರ್ಕಾರಿ ಶಾಲಾ-ಕಾಲೇಜುಗಳು ಖಾಸಗಿ ಶಾಲೆಗಳಿಗಿಂತ ಉತ್ತಮ ಫಲಿತಾಂಶ ಸಾಧಿಸುವಲ್ಲಿ ಯಶಸ್ಸು ಕಂಡುಕೊಂಡಿದ್ದು, ಕಡುಬಡವರ, ರೈತರ, ಕೂಲಿಕಾರ್ಮಿಕರ ವಿದ್ಯಾರ್ಥಿಗಳ ಮಕ್ಕಳ ಭವಿಷ್ಯತ್ತಿನ ಭವಿಷ್ಯ ನಿರ್ಮಿಸುವ ಕೇಂದ್ರಗಳಾಗಿ ಹೊರಹೊಮ್ಮಿವೆ. ಇದರ ಸಂಪೂರ್ಣ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.

ಈ ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಾವರಿಗೆ ಆದ್ಯತೆ ನೀಡಿದ್ದರಿಂದ ತೋಟಗಾರಿಕೆ ಬೆಳೆಗಳಿಗೆ ರೈತರು ಪ್ರಾಮುಖ್ಯ ನೀಡುತ್ತಿದ್ದಾರೆ. ಜತೆಗೆ ಈ ಭಾಗದ ರೈತ ಮಕ್ಕಳು ಶೈಕ್ಷಣಿಕ ಪ್ರಗತಿ ಹೊಂದಬೇಕು. ತೋಟಗಾರಿಕಾ ಕಾಲೇಜು ಆರಂಭಿಸಲು ₹ 150 ಕೋಟಿ ಅನುದಾನ ಬೇಕಾಗಿದೆ. ಮೂರು ಹಂತಗಳಲ್ಲಿ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಮೊದಲಿಗೆ ₹45 ಕೋಟಿ ಅನುದಾನ ಬೇಕು. ಶೀಘ್ರದಲ್ಲಿಯೆ ಅದಕ್ಕೆ ಚಾಲನೆ ನೀಡಲಾಗುವುದು. ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರಗತಿಯಲ್ಲಿ ಮುಕ್ತಾಯಗೊಳಿಸಿ ಎಂದು ಹೇಳಿದರು.

ಕಾಂಗ್ರೆಸ್ ತಾಲೂಕು ಅಧ್ಯಕ್ಷ ಡಿ.ಡಿ. ಮೋರನಾಳ ಮಾತನಾಡಿ, ಶಾಸಕ ಜಿ.ಎಸ್. ಪಾಟೀಲ ಅವರು ಡಂಬಳ ಹೋಬಳಿ ಭಾಗದಲ್ಲಿ ಅತಿ ಹೆಚ್ಚು ಅನುದಾನ ವಿನಿಯೋಗಿಸಿದ್ದಾರೆ. ಡಾಂಬರ್ ರಸ್ತೆ, ಕಾಂಕ್ರೀಟ್ ರಸ್ತೆ, ರೈತರ ಹಿತ ಕಾಯುವುದಕ್ಕಾಗಿ ಕಾಲುವೆಗಳ ನಿರ್ಮಾಣ, ಶೈಕ್ಷಣಿಕ ಪ್ರಗತಿಗಾಗಿ ಹಲವು ವಸತಿ ನಿಲಯಗಳ, ಶಾಲಾ ಕೊಠಡಿಗಳ ನಿರ್ಮಾಣ, ಶಾಲೆಗಳಿಗೆ ಮೂಲ ಸೌಲಭ್ಯ ಒದಗಿಸುವ ಮೂಲಕ ಈ ಭಾಗದ ರೈತರ, ಕೂಲಿಕಾರ್ಮಿಕರ, ವಿದ್ಯಾರ್ಥಿಗಳ ಪ್ರಗತಿಗಾಗಿ ಶ್ರಮಿಸುತ್ತಿರುವ ಧೀಮಂತ ನಾಯಕರಾಗಿದ್ದಾರೆ ಎಂದು ಹೇಳಿದರು.

ಗದಗ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿ ಅಮಿತ ಬಿದರಿ ಮಾತನಾಡಿ, 120 ವಿದ್ಯಾರ್ಥಿಗಳಿಂದ ವಸತಿ ನಿಲಯದ ಕಟ್ಟಡ ಈಗಾಗಲೇ ಇದ್ದು, ಹೆಚ್ಚಿನ ವಿದ್ಯಾರ್ಥಿಗಳಿಗಾಗಿ ಈ ಕಟ್ಟಡ ನಿರ್ಮಾಣದ ಕಾಮಗಾರಿ ಅನುಕೂಲವಾಗಲಿದೆ. ಅಲ್ಲದೆ ಶೀಘ್ರದಲ್ಲಿಯೆ 12 ಶಿಕ್ಷಕರ ವಸತಿಗೃಹಗಳು ನಿರ್ಮಾಣ ಆಗಲಿವೆ. ಅಲ್ಪಸಂಖ್ಯಾತ ಸಮೂಹಗಳಿಗೆ ಕೆಎಎಸ್, ಐಎಎಸ್, ಪಿಎಸ್ಐ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಉಚಿತ ತರಬೇತಿಯನ್ನು ಇಲಾಖೆಯಿಂದ ನೀಡಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ 10 ವಸತಿ ನಿಲಯಗಳಿವೆ. ಅದರಲ್ಲಿ 6 ಸಮೂಹದ ಅಲ್ಪಸಂಖ್ಯಾತ 75ರಷ್ಟು ವಿದ್ಯಾರ್ಥಿಗಳಿಗೆ, 25ರಷ್ಟು ಎಲ್ಲ ಸಮೂಹದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಇದರ ಸಂಪೂರ್ಣ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ದುರಗಮ್ಮ ತಳಗೇರಿ, ಗೋಣಿಬಸಪ್ಪ ಕೊರ್ಲಹಳ್ಳಿ, ಬಸುರಡ್ಡಿ ಬಂಡಿಹಾಳ, ಮರಿಯಪ್ಪ ಸಿದ್ದಣ್ಣವರ, ಶರಣಪ್ಪ ಬಂಡಿಹಾಳ, ಯಮನಪ್ಪ ಚುಂಗಿನ, ಶೋಭಾ ಮೇಟಿ, ಭುವನೇಶ್ವರಿ ಕಲ್ಲಕುಟಿಗರ, ಸೋಮಪ್ಪ ಹೈತಾರ, ಹೇಮಂತ ಹಾರೂಗೇರಿ, ಹಾಲಪ್ಪ ಅಮರಗೋಳ, ಅಮರೇಶ ಹಿರೇಮಠ, ಈರಣ್ಣ ಬೆಂಚಿ, ಬಸುರಾಜ ಮೇಟಿ, ನಿಂಗಪ್ಪ ಪೆದ್ದಾರ, ಮಳ್ಳಪ್ಪ ಒಂಟಲಭೋವಿ, ಶಿವು ಚಿಕ್ಕಣ್ಣವರ, ಕುಮಾರ ಸಿದ್ನೆಕೊಪ್ಪ, ಕುಮಾರ ಉದ್ದಂಡಿ, ಪ್ರಥಮ ದರ್ಜೆ ಗುತ್ತಿಗೆದಾರರು ಅಜರುದ್ದೀನ ದ್ಯಾಂಪುರ, ವಿಜಯ ಮುಳಗುಂದ, ಕನಕಮೂರ್ತಿ, ಗ್ರಾಮದ ಹಿರಿಯರು ಯುವಕರು, ಮಹಿಳೆಯರು ಇಲಾಖೆಯ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''