ಕೊಪ್ಪಳ:
ಗೃಹಲಕ್ಷ್ಮೀ ಯೋಜನೆ ಕುರಿತು ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾತನಾಡಿ, ನವೆಂಬರ್, ಡಿಸೆಂಬರ್ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಜಮೆಯಾಗಲಿದೆ. ಜನವರಿ, ಫೆಬ್ರುವರಿ ಹಣ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.
ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿದಿರುವ ಮಾಹಿತಿಯುಳ್ಳ ನಾಮಫಲಕ ಅಳವಡಿಸಿಲ್ಲ ಎಂದು ಸದಸ್ಯರು ತಿಳಿಸಿದಾಗ, ನಾಮಫಲಕ ಕೂಡಲೇ ಅಳವಡಿಸಲು ಕ್ರಮವಹಿಸಬೇಕೆಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಜರುಗಲಿದ್ದು, ಇಲಾಖೆಯ ಅಧಿಕಾರಿಗಳು ಫಲಾನುಭವಿಗಳನ್ನು ಗ್ರಾಮವಾರು ಸಮಾವೇಶಕ್ಕೆ ಕರೆತರುವ ಕುರಿತು ಚರ್ಚಿಸಲಾಯಿತು.
ತಹಸೀಲ್ದಾರ್ ವಿಠ್ಠಲ್ ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳಿದ್ದರು.