ಮೇ 4ರಂದು ಸಿಎಂರಿಂದ ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಶಾಸಕ ಶ್ರೀನಿವಾಸ ಮಾನೆ

KannadaprabhaNewsNetwork |  
Published : Apr 24, 2025, 11:47 PM IST
ಫೋಟೊ: 24ಎಚ್‌ಎನ್‌ಎಲ್3 | Kannada Prabha

ಸಾರಾಂಶ

ಮೇ 4ರಂದು ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಉದ್ಘಾಟಿಸುವರು.

ಹಾನಗಲ್ಲ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಹಲವು ಸಚಿವರು ಮೇ 4ರಂದು ತಾಲೂಕಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.ಗುರುವಾರ ಇಲ್ಲಿನ ತಾಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಹಲವು ಇಲಾಖೆಗಳ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮಹತ್ವಾಕಾಂಕ್ಷೆಯ ಬಾಳಂಬೀಡ ಏತ ನೀರಾವರಿ ಯೋಜನೆ, ಹಾನಗಲ್ಲ ಪಟ್ಟಣದಲ್ಲಿ ನಿರ್ಮಾಣಗೊಂಡ ಸರ್ಕಾರಿ ಇಲಾಖೆಗಳ ಸಮುಚ್ಚಯ, ಇಂದಿರಾ ಕ್ಯಾಂಟೀನ್, ಅಕ್ಕಿಆಲೂರಿನ ಪ್ರವಾಸಿ ಮಂದಿರ, ಬಾಳಂಬೀಡದ 110 ಕೆವಿ ವಿದ್ಯುತ್ ಕೇಂದ್ರ, ಎಪಿಎಂಸಿ ಉಗ್ರಾಣ ಹಾಗೂ ವಾಣಿಜ್ಯ ಸಂಕಿರ್ಣ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಉದ್ಘಾಟಿಸಲಿದ್ದು, 14 ಆಯುಷ್ಮಾನ್ ಆರೋಗ್ಯ ಉಪ ಕೇಂದ್ರಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.

ಇಂಧನ ಸಚಿವ ಕೆ.ಜೆ. ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದರು.ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ತಕ್ಷಣ ನೀಡಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು. ಸವಣೂರು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್.ವೈ. ಶಿರಕೋಳ, ತಹಸೀಲ್ದಾರ್ ರೇಣುಕಾ ಎಸ್., ತಾಪಂ ಇಒ ಪರಶುರಾಮ ಪೂಜಾರ ಸೇರಿದಂತೆ ಹಲವು ಇಲಾಖೆಗಳ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಹಾಗೂ ನೀಟ್ ಪರೀಕ್ಷೆಯಲ್ಲಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರಿವು ವಿದ್ಯಾಭ್ಯಾಸ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಂಬಿಬಿಎಸ್, ಎಂಜಿನಿಯರಿಂಗ್, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಆಯ್ಕೆ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಬೌದ್ದ, ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲದ ಯೋಜನೆಯಡಿ ಆನ್‌ಲೈನ್ ಮೂಲಕ ಮೇ 23ರೊಳಗಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಹಾರ್ಡ್‌ಕಾಪಿ ಮೇ 31ರೊಳಗಾಗಿ ಹಾವೇರಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. 08375- 234114 ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ