೨೫ರಂದು ಕನಕ ಸಮುದಾಯ ಭವನಕ್ಕೆ ಸಿಎಂ ಭೂಮಿ ಪೂಜೆ

KannadaprabhaNewsNetwork |  
Published : Apr 22, 2025, 01:53 AM IST
ಏ. ೨೫ರಂದು ಮುಖ್ಯಮಂತ್ರಿಗಳಿಂದ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿ ಪೂಜೆ | Kannada Prabha

ಸಾರಾಂಶ

ಚಾಮರಾಜನಗರದಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎನ್.ನಂಜೇಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಾಲೂಕಿನ ಮಂಗಲ ಗ್ರಾಮದಲ್ಲಿರುವ ಜಿಲ್ಲಾ ಕುರುಬರ ಸಂಘದ ನಿವೇಶನದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಏ.೨೫ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎನ್. ನಂಜೇಗೌಡ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೬ ಕೋಟಿ ಅಂದಾಜಿನ ಈ ಕನಕ ಸಮುದಾಯ ಭವನಕ್ಕೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ೨ ಕೋಟಿ ನೀಡಿದ್ದು, ಇನ್ನು ೨ ಕೋಟಿ ನೀಡಲಿದೆ. ಉಳಿದ ೨ ಕೋಟಿಯನ್ನು ದಾನಿಗಳಿಂದ ಸಂಗ್ರಹಿಸಿ ಭವ್ಯವಾದ ಕನಕ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಎಂದರು. ನಿವೇಶನ ೧ ಎಕರೆ ೨೨ ಗುಂಟೆ ಇದ್ದು ಮುಂದೆ ಶಾಲೆ, ವಸತಿ ನಿಲಯ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು.ಏ.೨೫ ರಂದು ನಡೆಯುವ ಭೂಮಿ ಪೂಜೆ ಸಮಾರಂಭದಲ್ಲಿ ಕೆ.ಆರ್‌.ನಗರ ತಾಲೂಕಿನ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಪೀಠಾಧಿಪತಿ ಡಾ. ಶಿವಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್, ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ, ಸಂಸದ ಸುನಿಲ್ ಬೋಸ್ ಭಾಗವಹಿಸಲಿದ್ದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಮುಖ್ಯ ಅತಿಥಿಗಳಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಎಂ.ಆರ್.ಮಂಜುನಾಘ್, ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ರಾಮಯ್ಯ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎನ್. ನಂಜೇಗೌಡ, ಸುಬ್ರಹ್ಮಣ್ಯ, ರಾಜೇಶ್ವರಿ.ಎಂ ಸ್ವಾಮಿ, ಎಂ.ಎಸ್. ಅಣ್ಣಪ್ಪಸ್ವಾಮಿ ಮತ್ತು ಸದಸ್ಯರು ಇರಲಿದ್ದಾರೆ ಎಂದರು. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಗೌರವ ಅಧ್ಯಕ್ಷರಾದ ಜನ್ನೂರು ಮಹದೇವು ಉಪಾಧ್ಯಕ್ಷರಾದ ನಟರಾಜು, ಪ್ರದಾನಕಾರ್ಯದರ್ಶಿ ಶಿವಲಿಂಗೇಗೌಡ, ಸ್ವಾಮಿ, ಮಂಜುನಾಥ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''