ಕನ್ನಡಪ್ರಭ ವಾರ್ತೆ ಆಲಮಟ್ಟಿ
ರಾಜ್ಯ ಸರ್ಕಾರದ ಪ್ರಮುಖ ನೀರಾವರಿ ಯೋಜನೆಯಲ್ಲೊಂದಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸ್ಥಾನ ಆಲಮಟ್ಟಿಯ ತುಂಬಿದ ಕೃಷ್ಣೆಯ ಜಲಧಿಗೆ ಶನಿವಾರ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಆನಂದ.ಕೆ ಹೇಳಿದರು.ಆಲಮಟ್ಟಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಸೆ.6 ಶನಿವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವರು, ಡಿಸಿಎಂ ಡಿ.ಕೆ.ಶಿವಕುಮಾರ, ಅವಳಿ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ಶಿಷ್ಟಾಚಾರ ಮತ್ತು ಸುರಕ್ಷಿತ ಭದ್ರತೆಗೆ ಅಗತ್ಯ ಪೂರ್ವ ಸಿದ್ದತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಸ್ಥಳ ಬದಲಾವಣೆ: ಬಾಗಿನ ಅರ್ಪಣೆಗೆ ನಿಗದಿತ ಸ್ಥಳದಿಂದ ಸುಮಾರು ಎರಡು ನೂರು ಮೀ. ಅಂತರದಲ್ಲಿ ಜಲಾಶಯದ ಮೇಲ್ಭಾಗದಿಂದ ಗಂಗಾ ಪೂಜೆ ಮತ್ತು ಬಾಗಿನ ಅರ್ಪಣೆ ಮಾಡಲು ಎಲ್ಲಾ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಪಂ. ಸಿಇಒ ರಿಷಿ ಆನಂದ, ಮುಖ್ಯ ಅಭಿಯಂತರ ಡಿ.ಬಸವರಾಜ, ಅಧೀಕ್ಷಕ ಅಭಿಯಂತರರಾದ ಗೋವಿಂದ ರಾಠೋಡ, ವಿ.ಆರ್.ಹಿರೇಗೌಡರ, ತಹಸೀಲ್ದಾರ್ ಎ.ಡಿ.ಅಮರಾವದಗಿ, ಕಾರ್ಯಪಾಲಕ ಅಭಿಯಂತರ ತಾರಾಸಿಂಗ್ ದೊಡ್ಡಮನಿ, ಸಹಾಯಕ ಕಾರ್ಯಪಾಲಕ ಅಭಿಯಂತರ ರವಿ ಚಂದ್ರಗಿರಿಯವರ, ಡಿವೈಎಸ್ಪಿಗಳಾದ ಬಲ್ಲಪ್ಪ ನಂದಗಾವಿ, ಎಂ.ಎಂ.ಉಪಾಸೆ, ಸಿಪಿಐ ಅಶೋಕ ಚವ್ಹಾಣ, ಪಿಎಸ್‌ಐ ಎಫ್.ಎಸ್.ಇಂಡಿಕರ ಇತರರು ಇದ್ದರು.
ಸಿಎಂ ಆಗಮನ ಹಿನ್ನಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ವಿದ್ಯುದೀಪಾಂಕಾರ ಮಾಡಲಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಶನಿವಾರ ಬೆಳಿಗ್ಗೆ 11 ಗಂಟೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಉಪಸ್ಥಿತರಿರಲಿದ್ದು,ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲ್ಲಿದ್ದಾರೆ. ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ.ಪಾಟೀಲ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಭಾಗಿಯಾಗಲ್ಲಿದ್ದಾರೆ. ಸಂಸದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ರಾಜ್ಯಸಭೆ ಸಂಸದೆ ಡಾ.ಸುಧಾಮೂರ್ತಿ, ನಾರಾಯಣಸಾ ಭಾಂಡಗೆ, ಶಾಸಕ ಯಶವಂತರಾಯಗೌಡ ಪಾಟೀಲ, ಬಸವಗೌಡ ಪಾಟೀಲ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ಭೀಮನಗೌಡ(ರಾಜುಗೌಡ) ಪಾಟೀಲ, ಹೆಚ್.ವೈ.ಮೇಟಿ, ಜೆ.ಟಿ.ಪಾಟೀಲ, ಸಿದ್ದು ಸವದಿ, ವಿಜಯಾನಂದ ಕಾಶಪ್ಪನವರ, ಜಗದೀಶ ಗುಡಗುಂಟಿ, ಭೀಮಸೇನ ಚಿಮ್ಮನಕಟ್ಟಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ.ಎನ್, ವಿಧಾನ ಪರಿಷತ್ ಶಾಸಕರಾದ ಪ್ರಕಾಶ ಹುಕ್ಕೇರಿ, ಸಿ.ಎಸ್.ನಾಡಗೌಡ, ಡಾ.ಉಮಾಶ್ರೀ, ಸುನೀಲಗೌಡ ಪಾಟೀಲ, ಹಣಮಂತ ನಿರಾಣಿ, ಕೇಶವಪ್ರಸಾದ.ಎಸ್, ಪಿ.ಎಚ್.ಪೂಜಾರ ಸೇರಿ ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಜಲ ಸಂಪನ್ಮೂಲ ಇಲಾಖೆಯ ಗೌರವ್ ಗುಪ್ತ, ಸರ್ಕಾರದ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ್, ಕೃಷ್ಣ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಲಮಟ್ಟಿ ಆಣೆಕಟ್ಟು ವಲಯದ ಮುಖ್ಯ ಎಂಜನೀಯರ್ ಬಸವರಾಜ್.ಡಿ ಸೇರಿ ಇಲಾಖೆಯ ಅಧಿಕಾರಿಗಳು, ಸಂಘ, ಸಂಸ್ಥೆಯ ಪ್ರಮುಖರು, ರಾಜಕೀಯ ಧುರೀಣರು, ರೈತ ಬಾಂಧವರು ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗಿಯಾಗಲ್ಲಿದ್ದಾರೆ.