-ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಭಿಮತ । ಕಸ್ತೂರಿ ರಂಗನ್ ವರದಿ ಕುರಿತ ಪದವಿ ಕಾಲೇಜಿನಲ್ಲಿ ರೈತರೊಂದಿಗೆ ಸಂವಾದ । ಬಹಿರಂಗ ಸಭೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಿಲ್ಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ರೈತರು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆ.19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಳಗ್ಗೆ 10 ಗಂಟೆಗೆ ತೀರ್ಥಹಳ್ಳಿಗೆ ಆಗಮಿಸುವ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಸ್ತೂರಿ ರಂಗನ್ ವರದಿ ಕುರಿತ ಪದವಿ ಕಾಲೇಜಿನಲ್ಲಿ ರೈತರೊಂದಿಗೆ ಸಂವಾದ ಹಾಗೂ ಅನಂತಮೂರ್ತಿ ಪ್ರೌಢ ಶಾಲೆ ಮೈದಾನದಲ್ಲಿ ನಡೆವ ಬಹಿರಂಗ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೆ.21ರಿಂದ 23ರವರೆಗೆ ವಿಧಾನಮಂಡಲದ ವಿಶೇಷ ಅಧಿವೇಶನವೂ ನಡೆಯಲಿದೆ. ಕಸ್ತೂರಿ ರಂಗನ್ ವರದಿ ಕುರಿತು ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ರೈತರು ಹಾಗೂ ಸಾರ್ವಜನಿಕರ ಅಭಿಪ್ರಾಯ ಆಲಿಸುವ ಪ್ರಕ್ರಿಯೆಯ ಭಾಗವಾಗಿ ಈ ಸಭೆ ನಡೆಯುತ್ತಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, 25000 ಸಾವಿರ ಜನರು ಭಾಗವಹಿಸುವ ಸಾಧ್ಯತೆ ಇದೆ ಎಂದರು.
ಬಿಜೆಪಿ ಶಾಸಕರ ವಿರುದ್ಧ ವಾಗ್ದಾಳಿ:
ಯಾವುದೇ ಹಾಡಿನಿಂದ ನಿಮ್ಮ ಹಸುವನ್ನು ತಡೆಯೋಕೆ ಆಗಲಿ ಅಥವಾ ನಮ್ಮ ಹಸುವನ್ನು ತಡೆಯೋಕೆ ಆಗಲಿ ಸಾಧ್ಯವಿಲ್ಲ. ಹಾಡುಗಳು ಜನರನ್ನು ಒಗ್ಗೂಡಿಸುವಂತಿರಬೇಕು. ಎಲ್ಲಾ ಹೃದಯಗಳನ್ನು, ಎಲ್ಲಾ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸವಾಗಬೇಕೇ ಹೊರತು ಪ್ರಚಾರಕ್ಕಾಗಿ ರಾಜಕೀಯ ಮಾಡಬಾರದು. ಹಾಡಿನಿಂದ ಯಾರ ಹಸಿವನ್ನು ತಡೆಯಲು ಸಾಧ್ಯವಿಲ್ಲವಾದ್ದರಿಂದ, ಉದ್ಯೋಗ, ಮನೆ, ನಿವೇಶನ ಸೇರಿದಂತೆ ಜನರ ಮೂಲಭೂತ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲು ಒತ್ತು ನೀಡಬೇಕು ಎಂದು ಹೇಳಿದರು.
ಶಿವಮೊಗ್ಗದ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿದರು.