ರಾಜ್ಯದ ಹಲವು ಮಹತ್ವದ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಒತ್ತಾಯಿಸಿದ್ದಾರೆ.
ನವದೆಹಲಿ : ಪುಣೆ- ಬೆಂಗಳೂರು ಗ್ರೀನ್ ಫೀಲ್ಡ್ ಎಕ್ಸ್ ಪ್ರೆಸ್ ವೇ ಶೀಘ್ರ ಮಂಜೂರು, ಶಿರಾಡಿ ಘಾಟ್‌ನಲ್ಲಿ ಸುರಂಗ ನಿರ್ಮಾಣ ಮಾಡುವ ಮೂಲಕ ದೇಶದ 7ನೇ ಅತಿ ದೊಡ್ಡ ಬಂದರು ಹೊಂದಿರುವ ಮಂಗಳೂರು ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವೆ ಸಂಪರ್ಕ ಸುಧಾರಿಸುವುದು ಸೇರಿ ರಾಜ್ಯದ ಹಲವು ಮಹತ್ವದ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಒತ್ತಾಯಿಸಿದ್ದಾರೆ.
ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿರುವ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಪ್ರಮುಖ ಯೋಜನೆಗಳ ವಿವರದೊಂದಿಗೆ ಮನವಿ ಪತ್ರ ಸಲ್ಲಿಸಿದರು.
ಮೈಸೂರು ನಗರ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಫ್ಲೈಓವರ್ ನಿರ್ಮಾಣ, 30.35 ಕಿ.ಮೀ. ಉದ್ದದ ಹುಬ್ಬಳ್ಳಿ ಧಾರವಾಡ ಅಷ್ಟಪಥ ಬೈಪಾಸ್ ನಿರ್ಮಾಣ, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಶರಾವತಿ ಹಿನ್ನೀರಿನಲ್ಲಿ ಸಿಗಂದೂರು ಸೇತುವೆ ನಿರ್ಮಾಣ ಮುಂತಾದ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಮನವಿ ಮಾಡಿದರು.
ಸಂಚಾರ ದಟ್ಟಣೆ ಸುಗಮಗೊಳಿಸಲು ಮೈಸೂರಿನ ರಾಷ್ಟ್ರೀಯ ಹೆದ್ದಾರಿ -275ರಲ್ಲಿ 9ಗ್ರೇಡ್ ಸಪರೇಟರ್ಗಳ ನಿರ್ಮಾಣ ಮಾಡಬೇಕು. ಬೆಂಗಳೂರಿ ನಗರದ ಹೆಬ್ಬಾಳ ಜಂಕ್ಷನ್‌ನ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಮೇಲ್ಸೇತುವೆ ನಿರ್ಮಾಣ,
ಬೆಂಗಳೂರು ನಗರದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುರಂಗದ ನಿರ್ಮಾಣ ಮತ್ತು ಹೊಸೂರು ರಸ್ತೆ ಮಾರ್ಗವಾಗಿ ತುಮಕೂರು ರಸ್ತೆ, ಬಳ್ಳಾರಿ ರಸ್ತೆ ಮತ್ತು ಹಳೆ ಮದ್ರಾಸು ರಸ್ತೆ ಅಭಿವೃದ್ಧಿ, ಬೆಳಗಾವಿ ನಗರದ ರಾ.ಹೆ-4ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಕಲಬುರಗಿ-ವಾಡಿ-ಯಾದಗಿರಿ-ಕೆಂದೆಚೂರ್-ಜಡ್ ಚೇರ್ಲಾ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಿ ರಸ್ತೆ ಅಗಲೀಕರಣ ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಗಡ್ಕರಿ ಅವರನ್ನು ಒತ್ತಾಯಿಸಿದರು.