ಸಿಎಂ ಆಗಮನ: ಕಪ್ಪುಬಟ್ಟೆ ಧರಿಸಿ ಪ್ರತಿಭಟನೆಗೆ ಅವಕಾಶವಿಲ್ಲ

KannadaprabhaNewsNetwork |  
Published : Dec 04, 2025, 02:15 AM IST
ನವಲಗುಂದ ಪೊಲೀಸ್ ಠಾಣೆಯಲ್ಲಿ ರೈತರೊಂದಿಗೆ ಎಸ್ಪಿ ಗುಂಜನ್ ಆರ್ಯ, ತಹಸೀಲ್ದಾರ್ ಸುಧೀರ ಸಾಹುಕಾರ ಸಭೆ ನಡೆಸಿದರು. | Kannada Prabha

ಸಾರಾಂಶ

ಡಿ. 7ರಂದು ಪಟ್ಟಣದಲ್ಲಿ ಶಾಸಕ ಎನ್‌.ಎಚ್. ಕೋನರಡ್ಡಿ ಆಯೋಜಿಸಿರುವ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮುಖ್ಯಮಂತ್ರಿಗೆ ರೈತರು ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಮಾಹಿತಿ ದೊರೆತಿದೆ.

ನವಲಗುಂದ:

ರೈತರ ಸಮಸ್ಯೆಗಳು ಏನೇ ಇದ್ದರೂ ಗಮನಕ್ಕೆ ತಂದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಅವಕಾಶ ನೀಡಲಾಗುವುದು. ಯಾವುದೇ ಕಾರಣಕ್ಕೂ ಕಪ್ಪುಬಟ್ಟಿ ಧರಿಸಿ ಪ್ರತಿಭಟಿಸಲು ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗುಂಜನ್‌ ಆರ್ಯ ಹೇಳಿದರು.

ಅವರು ಬುಧವಾರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ರೈತರೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಡಿ. 7ರಂದು ಪಟ್ಟಣದಲ್ಲಿ ಶಾಸಕ ಎನ್‌.ಎಚ್. ಕೋನರಡ್ಡಿ ಆಯೋಜಿಸಿರುವ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮುಖ್ಯಮಂತ್ರಿಗೆ ರೈತರು ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಮಾಹಿತಿ ದೊರೆತಿದೆ. ಅಂದಿನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಇದೊಂದು ಖಾಸಗಿ ಕಾರ್ಯಕ್ರಮವಾಗಿದ್ದು, ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಅವಕಾಶವಿರುವುದಿಲ್ಲ. ರೈತರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾರೆ ಸಿಎಂ ಕಾರ್ಯಾಲಯದ ಸಿಬ್ಬಂದಿಗಳೊಂದಿಗೆ ಮಾತನಾಡಿ ಮನವಿ ಸಲ್ಲಿಸಲು ಅವಕಾಶ ಒದಗಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಲೋಕನಾಥ ಹೆಬಸೂರ, ಎಸ್ಪಿ ಅವರ ಸಲಹೆಗೆ ಸಹಮತ ವ್ಯಕ್ತ ಪಡಿಸಿದರಲ್ಲದೇ ರೈತರಿಗೆ ಕಳೆದ 2 ವರ್ಷಗಳಿಂದ ಬೆಳೆ ಪರಿಹಾರ ಹಾಗೂ ಬೆಳೆ ವಿಮೆ ಬಂದಿಲ್ಲ, ಗೋವಿನಜೋಳ ಹಾಗೂ ಹೆಸರು ಬೆಳೆಯನ್ನು ಬೆಂಬಲ ಬೆಲೆಯಡಿ ಖರೀದಿಸಲು ಸೂಚಿಸಲಾಗಿದ್ದರೂ ಈ ವರೆಗೂ ಹೆಸರು ಬೆಳೆ ಖರೀದಿಸಲು ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಆದಷ್ಟು ಬೇಗನೆ ರೈತರ ಸಮಸ್ಯೆಗಳಿಗೆ ಮುಖ್ಯಮಂತ್ರಿ ಪರಿಹಾರ ಒದಗಿಸಬೇಕು. ಕಡಲೆಗೆ ₹8 ಸಾವಿರ ಬೆಂಬಲ ಬೆಲೆ ನಿಗದಿ ಪಡಿಸಬೇಕು ಹಾಗೂ ಕಳಸಾ ಬಂಡೂರಿ ಯೋಜನೆ ಕುರಿತಾಗಿ ಕೇಂದ್ರ ಸಚಿವರು ರೈತರೊಂದಿಗೆ ಚರ್ಚಿಸಬೇಕು ಇಲ್ಲವಾದಲ್ಲಿ ಡಿ. 8ರಂದು ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಡಿಎಸ್‍ಪಿ ಶಿವಾನಂದ ಕಟಗಿ, ಸಿಪಿಐ ರವಿ ಕಪ್ಪತ್ತನವರ, ಎಸ್‍ಐ ಜನಾರ್ಧನ, ತಹಸೀಲ್ದಾರ್ ಸುಧೀರ ಸಾಹುಕಾರ, ರೈತ ಮುಖಂಡರಾದ ಸುಭಾಸಚಂದ್ರಗೌಡ ಪಾಟೀಲ್, ರಘುನಾಥ ನಡುವಿನಮನಿ, ಯಲ್ಲಪ್ಪ ದಾಡಿಬಾವಿ, ಶಿರಾಜ ಧಾರವಾಡ, ನಿಂಗಪ್ಪ ಕೆಳಗೇರಿ ಸೇರಿದಂತೆ ಹಲವು ರೈತ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಡಘಟ್ಟ ಗ್ರಾ.ಪಂ.ಗೆ ಗಾಂಧೀಗ್ರಾಮ ಪುರಸ್ಕಾರ: ರುದ್ರಮ್ಮ ಬಸವರಾಜು
ಕಳವಾಗಿದ್ದ ಮೊಬೈಲ್‌ಗಳ ಪತ್ತೆ: ವಾರಸುದಾರರಿಗೆ ಹಸ್ತಾಂತರ