ಸಿಎನ್‌ಸಿ 53 ಗಂಟೆಗಳ ಸತ್ಯಾಗ್ರಹ ಪೂರ್ಣ

KannadaprabhaNewsNetwork |  
Published : May 17, 2026, 02:30 AM IST
ಚಿತ್ರ : 16ಎಂಡಿಕೆ3 : ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣರಿಗೆ ಮನವಿ ಸಲ್ಲಿಸಿದ ಎನ್.ಯು.ನಾಚಪ್ಪ  | Kannada Prabha

ಸಾರಾಂಶ

ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ಘೋಷಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 53 ಗಂಟೆಗಳ ಸತ್ಯಾಗ್ರಹವನ್ನು ಪೂರ್ಣಗೊಳಿಸಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ಘೋಷಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 53 ಗಂಟೆಗಳ ಸತ್ಯಾಗ್ರಹವನ್ನು ಪೂರ್ಣಗೊಳಿಸಿತು.ನಗರದ ಕೊಡವ ಮಂದ್ ನಲ್ಲಿ ಸತ್ಯಾಗ್ರಹ ನಡೆಸಿದ ಸಿಎನ್‌ಸಿ ತನ್ನ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಿತು. ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು. ಹೈಕೋರ್ಟ್ ವಕೀಲ ಕಿರಣ್ ನಾರಾಯಣ್ ಅವರು ಕೂಡ ಸತ್ಯಾಗ್ರಹ ನಿರತರನ್ನು ಭೇಟಿಯಾಗಿ ಚರ್ಚಿಸಿದರು. ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಎನ್.ಯು.ನಾಚಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬೇಡಿಕೆಯ ಬಗ್ಗೆ ಮನವರಿಕೆ ಮಾಡಿಕೊಂಡರು.ಕಳೆದ 36 ವರ್ಷಗಳಿಂದ ಭೌಗೋಳಿಕ ಸ್ವಾಯತ್ತತೆ, ಸ್ವಯಂ ಆಡಳಿತ ಮತ್ತು ಮೂಲನಿವಾಸಿ ಏಕ-ಜನಾಂಗೀಯ ಪ್ರಕೃತಿ ಆರಾಧಕ ಕೊಡವರಿಗೆ ಪರಿಶಿಷ್ಟ ಪಂಗಡ ಸ್ಥಾನಮಾನಕ್ಕಾಗಿ ಒತ್ತಾಯಿಸಿ ಸಿಎನ್‌ಸಿ ನಿರಂತರ ಶಾಂತಿಯುತ ಹೋರಾಟವನ್ನು ನಡೆಸುತ್ತಾ ಬಂದಿದೆ. ಕೊಡವರಿಗೆ ಸಾಂವಿಧಾನಿಕ ರಾಜಕೀಯ ಭದ್ರತೆ ಮತ್ತು ಪ್ರಾತಿನಿಧ್ಯಕ್ಕಾಗಿ ಪ್ರಸ್ತುತ ಪ್ರತ್ಯೇಕ ವಿಧಾನಸಭೆ ಹಾಗೂ ಲೋಕಸಭಾ ಕ್ಷೇತ್ರ ರಚನೆಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದರು. ಪಟ್ಟಮಾಡ ಲಲಿತಾ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ಸವಿತಾ ತಿಮ್ಮಯ್ಯ, ನಂದಿನೆರವAಡ ನಿಶಾ ಅಚ್ಚಯ್ಯ, ಮಡಿಕೇರಿ ಕೊಡವ ಸಮಾಜದ ಕಾರ್ಯದರ್ಶಿ ಬೊಪ್ಪಂಡ ಸರಳಾ, ಕನ್ನಂಡ ಕವಿತಾ ಬೊಳ್ಳಿಯಪ್ಪ, ಮೇಧುರ ಗಂಗಮ್ಮ ಕಾವೇರಪ್ಪ, ಮೇಧುರ ಶ್ರೇಯ ಮುತ್ತಮ್ಮ, ಬಾಚರಣಿಯಂಡ ಚಿಪ್ಪಣ್ಣ, ನಂದೇಟಿರ ರವಿ ಸುಬ್ಬಯ್ಯ, ಮಂದಪಂಡ ಮನೋಜ್ ಮಂದಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ದೆಹಲಿ ಕೊಡವ ಸಮಾಜದ ಅಧ್ಯಕ್ಷರಾದ ಮಾಚಿಮಂಡ ತಮ್ಮು ಕಾರ್ಯಪ್ಪ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ ಅಜ್ಜಿಕಂಡ ಮಹೇಶ್ ನಾಚಯ್ಯ, ಸಮಾಜ ಸೇವಕ ತೆನ್ನಿರ ಮೈನಾ ಮಾತನಾಡಿ ಬೆಂಬಲ ಸೂಚಿಸಿದರು. ಹೈಕೋರ್ಟ್ ವಕೀಲ ಬೊಳ್ಳಾರಪಂಡ ಬೋಪಣ್ಣ ಹಾಗೂ ಸೂರಜ್ ಹೊಸೂರು ಹಾಜರಿದ್ದರು.ಮನವಿಯ ಪ್ರತಿಗಳನ್ನು ಕರ್ನಾಟಕದ ಮುಖ್ಯಮಂತ್ರಿ, ಕೇಂದ್ರ ಗೃಹ ಸಚಿವರು, ಕೇಂದ್ರ ಕಾನೂನು ಸಚಿವರು ಮತ್ತು ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಿಗೆ ರವಾನಿಸಲಾಯಿತು.ತಮ್ಮ ಪ್ರಭಾವಿ ಸ್ಥಾನವನ್ನು ಬಳಸಿಕೊಂಡು ಉನ್ನತ ಸಾಂವಿಧಾನಿಕ ಪ್ರಾಧಿಕಾರಗಳಿಗೆ ಮನವಿಯನ್ನು ತಲುಪಿಸುವಂತೆ ಎ.ಎಸ್.ಪೊನ್ನಣ್ಣ ಅವರಲ್ಲಿ ಎನ್.ಯು.ನಾಚಪ್ಪ ಅವರು ಮನವಿ ಮಾಡಿದರು.

850 ಆಸನ

ವಿವಿಧ ಜನಾಂಗೀಯ ಗುಂಪುಗಳಿಗೆ ಸ್ಥಳಾವಕಾಶ ನೀಡಲು ಹೊಸ ಸಂಸತ್ತಿನಲ್ಲಿ ಈಗಾಗಲೇ 850 ಆಸನಗಳ ವ್ಯವಸ್ಥೆ ಮಾಡಲಾಗಿದೆ. ನ್ಯಾಯ ಮತ್ತು ಸಮಾನತೆಯ ಹಿತದೃಷ್ಟಿಯಿಂದ ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಕೊಡವರಿಗೂ ಸ್ಥಾನಮಾನ ನೀಡಬೇಕೆಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಿರಿಜನ ಹಾಡಿಯಲ್ಲಿ ಅನಧಿಕೃತ ಚರ್ಚ್: ತಮಿಳುನಾಡು ಮೂಲದ ಮಂದಿ ವಶಕ್ಕೆ
ಕಾರಿಂಜ ಸಹಿತ ಎರಡು ದೇವಸ್ಥಾನಕ್ಕೆ ಸಿಡಿಲಾಘಾತ