ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿದ ಸಿಎನ್‌ಸಿ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಸದಸ್ಯರು, 1941ರಿಂದ 2011ರ ವರೆಗಿನ ಜನಗಣತಿ ದಾಖಲೆಗಳು ಕೊಡವರನ್ನು ಜಾತಿ ಎಂದು ತಪ್ಪಾಗಿ ವರ್ಗೀಕರಿಸಿದ ಜನಗಣತಿ ದಾಖಲೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಎನ್.ಯು.ನಾಚಪ್ಪ ಮಾತನಾಡಿ, ವಿಶಿಷ್ಟ ಜನಾಂಗೀಯ ಗುಂಪಾದ ಕೊಡವರ ಸೂಕ್ತ ಸ್ಥಾನವನ್ನು ಕಸಿದುಕೊಂಡ ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಬೇಕು. ಕೊಡವರನ್ನು ಮೂಲ ವಂಶಸ್ಥ ಕೊಡವ ಸಮುದಾಯಕ್ಕೆ ಸೀಮಿತಗೊಳಿಸಿದ ಏಕ ಮತ್ತು ವಿಭಿನ್ನ ಜನಾಂಗೀಯ ಗುಂಪು ಎಂದು ಗುರುತಿಸಬೇಕು. ಕೊಡವರಿಗೆ ಸಂಬಂಧಿಸಿದಂತೆ ಜಾತಿಯ ಯಾವುದೇ ಉಲ್ಲೇಖವನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದರು.ರೇಖಾ ನಾಚಪ್ಪ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಪಟ್ಟಮಾಡ ಕುಶ, ಅಜ್ಜಿಕುಟ್ಟೀರ ಲೋಕೇಶ್, ಬೊಟ್ಟಂಗಡ ಗಿರೀಶ್, ಅರೆಯಡ ಗಿರೀಶ್, ಮಂದಪಂಡ ಮನೋಜ್, ಕಾಂಡೇರ ಸುರೇಶ್, ಕಾಟುಮಣಿಯಂಡ ಉಮೇಶ್, ಕಿರಿಯಮಾಡ ಶೆರಿನ್, ಕೂಪದಿರ ಸಾಬು, ಪುಟ್ಟಿಚಂಡ ಡಾನ್ ದೇವಯ್ಯ, ಬೇಪಡಿಯಂಡ ಬಿದ್ದಪ್ಪ, ಚೋಳಪಂಡ ನಾಣಯ್ಯ, ಮೇದುರ ಕಂಠಿ ನಾಣ್ಯಪ್ಪ ಮತ್ತಿತರರು ಪಾಲ್ಗೊಂಡು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.