ಕನ್ನಡಪ್ರಭ ವಾರ್ತೆ ಮಡಿಕೇರಿ
ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು, ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಘೋಷಿಸಬೇಕು, ಎಸ್‌ಟಿ ಟ್ಯಾಗ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಪರ ಘೋಷಣೆಗಳನ್ನು ಕೂಗಿದ ಸಿಎನ್‌ಸಿ ಸದಸ್ಯರು ಆದಿಮಸಂಜಾತ ಕೊಡವರ ಪ್ರಗತಿ ಹಾಗೂ ರಕ್ಷಣೆಗಾಗಿ ಸಂವಿಧಾನಬದ್ಧ ಹಕ್ಕುಗಳನ್ನು ಸರ್ಕಾರ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು.
ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಕೊಡವರು ಬೇರೆಯೇ ರೇಸ್/ ಮೂಲ ವಂಶಸ್ಥ ಜನಾಂಗವಾಗಿದ್ದು, ಅವರ ಸ್ವತಂತ್ರ ಅಸ್ತಿತ್ವ ಮತ್ತು ವ್ಯಕ್ತಿತ್ವವನ್ನು ಗುರುತಿಸಿ 1871-72ರಿಂದ 1931ರ ವರೆಗೆ ನಡೆಸಿದ ಜನಗಣತಿಯನ್ನು ಪುನರ್ ಮಾನದಂಡಗೊಳಿಸಿ ಕೊಡವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದರು.ಅಣ್ಣಳಮಾಡ ಹರಿಣಿ ದೇವಮ್ಮ, ಅಣ್ಣಳಮಾಡ ಹರ್ಷಿತಾ ದೇವಮ್ಮ, ಕೇಚಮಾಡ ಶಿಲ್ಪ, ಕೇಚಮಾಡ ಶ್ರದ್ಧಾ, ಬೊಟ್ಟಂಗಡ ಗಿರೀಶ್, ಬಾಚರಣಿಯಂಡ ಚಿಪ್ಪಣ್ಣ, ಅಜ್ಜಿಕುಟ್ಟೀರ ಲೋಕೇಶ್, ಕಿರಿಯಮಾಡ ಶೆರಿನ್, ಬೊಳ್ಳೇರ ವಾಸು, ಬೊಳ್ಳೇರ ಕುಮಾರ್ ಮತ್ತಿತರರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಕ್ಕೊತ್ತಾಯ ಮಂಡಿಸಿದರು.