ಕನ್ನಡಪ್ರಭ ವಾರ್ತೆ ಮಡಿಕೇರಿ
ಸಿದ್ದಾಪುರದ ಕಾಫಿ ತೋಟದ ಬೃಹತ್ ಭೂಪರಿವರ್ತನೆ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಭೂಪರಿವರ್ತನೆಗಳ ವಿರುದ್ಧ ಸಿಎನ್‌ಸಿ ಸಂಘಟನೆ ವತಿಯಿಂದ ಬಾಳೆಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಿಬಿಟಿಸಿ ಕಾಫಿ ತೋಟದಲ್ಲಿ ಒಂದು ಸಾವಿರ ಮರಗಳನ್ನು ಕಡಿಯಲು ಅನುಮತಿ ಪಡೆದು ಕೋಟ್ಯಾಂತರ ರು. ಬೆಲೆ ಬಾಳುವ ಸುಮಾರು 3- 4 ಸಾವಿರ ಮರಗಳನ್ನು ಹನನ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.ಕಾಫಿ ತೋಟಗಳ ಭೂಪರಿವರ್ತನೆಯಿಂದ ಕೊಡಗಿನ ಎಲ್ಲ ಗ್ರಾಮಗಳು ನಾಶವಾಗುತ್ತಿವೆ. ಮಣ್ಣು ಅಗೆಯುವ ಕೆಲಸದಿಂದ ಬಹುವಾರ್ಷಿಕ ಜಲಮೂಲಗಳ ನರ ಕೇಂದ್ರಗಳು ಈಗಾಗಲೇ ಮುಚ್ಚಿವೆ. ಇದರಿಂದ ಕೊಡಗಿನ ಮೇಲಾಗುವ ಅಪಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕು. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಎಸ್.ಟಿ ಟ್ಯಾಗ್, ಕೊಡವರ ಆಂತರಿಕ ರಾಜಕೀಯ ಸ್ವಯಂ ನಿರ್ಣಯದ ಹಕ್ಕುಗಳನ್ನು ಮಾನ್ಯ ಮಾಡಿದಾಗ ಮಾತ್ರ ಪವಿತ್ರ ಕೊಡವ ಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.
17ರಂದು ಸಿದ್ದಾಪುರದಲ್ಲಿ...:
ಪೋಡಮಾಡ ಜಾನಕಿ, ಮಾಪಂಗಡ ಯಮುನಾ, ಗಾಂಡಂಗಡ ಪ್ರತಿಮಾ, ಅಡ್ಡೇಂಗಡ ಪೊನ್ನಮ್ಮ, ಅಡ್ಡೇಂಗಡ ಗ್ರೀಷ್ಮಾ, ಮಲ್ಚಿರ ಕವಿತಾ ಬೋಜಪ್ಪ, ಮುಕ್ಕಾಟಿರ ಜಾನಕಿ ವಾಸು, ಅರ್ಮಣಮಾಡ ಮಮತಾ, ಕೊಕ್ಕಂಗಡ ಸ್ಮಿತ, ಅಡ್ಡೇಂಗಡ ಕಾವೇರಮ್ಮ, ಮಾಪಂಗಡ ಅಶೋಕ್, ಪೋಡಮಾಡ ಗಿರೀಶ್, ಕಾಂಡೇರ ಸುರೇಶ್, ಅಲ್ಮೇಂಗಡ ಬೋಸ್ ಮಂದಣ್ಣ, ಅಲ್ಮೇಂಗಡ ಪೊನ್ನಪ್ಪ, ಮಚ್ಚಮಾಡ ದೊರೆ ಉತ್ತಯ್ಯ, ಮೇಚಂಡ ಕಿಶು, ಚೆಕ್ಕೇರ ಸೂರ್ಯ ಅಯ್ಯಪ್ಪ, ಮತ್ತಿತರರು ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ವಿರುದ್ಧ ಮತ್ತು ಕೊಡವ ಲ್ಯಾಂಡ್ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.