ಕನ್ನಡಪ್ರಭ ವಾರ್ತೆ ಮಡಿಕೇರಿ
ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಸಿಎನ್‌ಸಿ ವತಿಯಿಂದ ಬಿಟ್ಟಂಗಾಲ ಜಂಕ್ಷನ್‌ನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವ್ಯಾಪಕವಾಗಿ ದುರ್ಬಳಕೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿ ದುರುಪಯೋಗವಾಗುತ್ತಿದ್ದು, ಇವರು ಇಂದು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಮೂಲಕ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಆರ್ಥಿಕ ಅಪರಾಧಿಗಳು ಹಾಗೂ ಉದ್ಯಮಪತಿಗಳು ಕೊಡವಲ್ಯಾಂಡ್ ನ ಪರಿಸರ ಸಂಪೂರ್ಣ ನಾಶ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು ಕೊಡವ ಲ್ಯಾಂಡ್ ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು ಅಗತ್ಯ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಗ್ರಾಮಸ್ಥರು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ನಿರ್ಣಯ ಕೈಗೊಂಡು ಪ್ರತಿಜ್ಞಾವಿಧಿ ಸ್ವೀಕರಿಸಬೇಕೆಂದು ಕರೆ ನೀಡಿದರು.