ಉಡುಪಿ: ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೆ, ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರ ಸಹಪಠ್ಯ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಜಿಲ್ಲಾ ಉಪನಿರ್ದೇಶಕ ಸತೀಶ್ ನಾಯಕ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಫಲಿತಾಂಶವಲ್ಲ ಎಂದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ. ಉಷಾ, ಗಂಗಾಧರ್ ವಿ.ಎ., ಶುಭಗೀತ, ಸ್ವಾತಿ, ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷೆ ಮಲ್ಲಿಕಾ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ವಿದ್ಯಾರ್ಥಿ ನಾಯಕಿ ಗ್ರೀಷ್ಮ, ಎನ್.ಎಸ್.ಎಸ್. ನಾಯಕಿ ವಿಜೇತಾ ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ಭವ್ಯಾ ನಾಗರಾಜ್ ನಿರೂಪಿಸಿ, ಸುಧಾ ಹೆಗಡೆ ವಂದಿಸಿದರು.