ಮಂಗಳೂರು: ಸಹಕಾರಿ ಸಂಘಗಳು ಸಹಕಾರ ಕಾಯ್ದೆಯಡಿ ನೋಂದಣಿಯಾದರೂ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನಿಯಮಗಳನ್ನು ಕೂಡ ಪಾಲಿಸಬೇಕಾಗಿದೆ. ಸಹಕಾರ ಕಾಯ್ದೆಗೂ ಆರ್‌ಬಿಐ ನಿಯಮಾವಳಿಗೂ ಬಹಳ ವ್ಯತ್ಯಾಸ ಇದೆ. ಈ ಬಗ್ಗೆ ಮುಂದೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷರೂ ಆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಸಹಕಾರಿ ಸಂಘಗಳು ಸಹಕಾರ ಕಾಯ್ದೆಯಡಿ ನೋಂದಣಿಯಾಗಿದ್ದರೂ ಸಾಲ ನೀಡಿಕೆಯಲ್ಲಿ ಆರ್‌ಬಿಐ ಮಾರ್ಗದರ್ಶನವನ್ನು ಪಾಲಿಸಬೇಕಾಗಿದೆ. ಈ ಸಂದರ್ಭ ಎರಡನ್ನೂ ಅಳವಡಿಸಿಕೊಂಡು ಮುನ್ನಡೆಯಬೇಕಾದ ಅನಿವಾರ್ಯತೆ ಬಂದೊದಗಿದೆ. ಆರ್‌ಬಿಐನ ಕೆಲವು ನಿಯಮಗಳನ್ನು ಅಳವಡಿಸಿಕೊಳ್ಳಲು ಕಷ್ಟವಾಗುತ್ತದೆ. ಸಹಕಾರಿ ಸಂಘಗಳು ಕಟ್ಟಡ ನಿರ್ಮಿಸಿದರೆ ಅದರಲ್ಲಿ ಹೆಚ್ಚುವರಿ ಜಾಗವನ್ನು ಬಾಡಿಗೆಗೆ ನೀಡಲು ಅಥವಾ ತಮ್ಮಲ್ಲೇ ಇರಿಸಿಕೊಳ್ಳಲು ನಿಯಮದಲ್ಲಿ ಅವಕಾಶ ಇರುವುದಿಲ್ಲ. ಸಾಲದ ವಿಚಾರದಲ್ಲಿ ಸುಸ್ತಿದಾರರ ಏಲಂ ಜಾಗವನ್ನು ಯಾರೂ ಪಡೆಯದಿದ್ದರೆ, ಅದಕ್ಕೆ ದಂಡ ವಿಧಿಸುತ್ತಾರೆ. ಹೀಗೆ ಸಹಕಾರಿ ಕಾಯ್ದೆ ಮತ್ತು ಆರ್‌ಬಿಐ ನಿಯಮದ ನಡುವೆ ತುಂಬ ವ್ಯತ್ಯಾಸ ಇದ್ದು ಇವುಗಳನ್ನು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ಸರಿಪಡಿಸಬೇಕಾಗಿದೆ ಎಂದರು.
ಸಹಕಾರಿ ಕ್ಷೇತ್ರ ಅತ್ಯಂತ ಪವಿತ್ರ:ಸಹಕಾರಿ ಕ್ಷೇತ್ರ ಹಾಗೂ ವಾಣಿಜ್ಯ ಬ್ಯಾಂಕ್‌ಗಳಿಗೆ ಬಹಳ ವ್ಯತ್ಯಾಸ ಇದೆ. ಸಹಕಾರ ಕ್ಷೇತ್ರ ಅತ್ಯಂತ ಪವಿತ್ರವಾಗಿದ್ದು, ಗ್ರಾಹಕರಿಂದ ಶೇರು, ಠೇವಣಾತಿ ಪಡೆದು ಕಷ್ಟಪಟ್ಟು ಬೆಳೆಸಿ ಲಾಭ ಪಡೆಯಲಾಗುತ್ತದೆ. ಆದರೆ ವಾಣಿಜ್ಯ ಬ್ಯಾಂಕ್‌ಗಳು ಸರ್ಕಾರಿ ಹಣವನ್ನು ಠೇವಣಿಯಾಗಿರಿಸಿ ನಿಬಡ್ಡಿ ಪಡೆದು ವ್ಯವಹರಿಸುತ್ತಾರೆ. ಹೀಗಾಗಿಯೇ ಮಲ್ಯ, ನೀರವ್ ಮುಂತಾದವರಿಗೆ ಸಾಲ ನೀಡಿ ಅತ್ತ ಸಾಲವೂ ವಸೂಲಿ ಇಲ್ಲದೆ, ಬಡ್ಡಿಯೂ ಕೈಗೆ ಸಿಗದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಸಾಲದ ಅಗತ್ಯತೆ ನಿಜವಾಗಿ ಇರುವವರಿಗೆ ನಾವು ನೆರವಾಗುತ್ತಿದ್ದು, ವಾಣಿಜ್ಯ ಬ್ಯಾಂಕ್‌ಗಳು ವಿಲೀನವಾಗುತ್ತಿದ್ದರೆ, ಸಹಕಾರಿ ಕ್ಷೇತ್ರ ವಿಕಸನದ ಹಾದಿಯಲ್ಲಿದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳು ಆಗುತ್ತಿವೆ. ಇಲ್ಲಿನ ಎಸ್‌ಸಿಡಿಸಿಸಿ ಬ್ಯಾಂಕ್‌ನ ಕಾರ್ಯವೈಖರಿಯನ್ನು ಮೆಚ್ಚಿಕೊಂಡ ಕೇಂದ್ರ, ಸಹಕಾರಿ ಕ್ಷೇತ್ರದ ಸುಧಾರಣೆಗೆ ಇಲ್ಲಿ ಕೈಗೊಂಡ ಕ್ರಮಗಳ ಮಾಹಿತಿಯನ್ನು ತರಿಸಿಕೊಂಡು ಇದೇ ಮಾದರಿಯನ್ನು ಎಲ್ಲ ಕಡೆಗಳಲ್ಲಿ ಕಾರ್ಯರೂಪಕ್ಕೆ ತರುವ ಉದ್ದೇಶ ಹೊಂದಿರುವುದು ಅಭಿಮಾನದ ಸಂಗತಿ ಎಂದರು. ಸಾಲಗಾರರ ದಾಖಲೆ ಪತ್ರ ಖಚಿತಪಡಿಸಿ:
ಡಾ.ಎಂ.ಎನ್.ಆರ್. ಮಾದರಿ:
ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ವತಿಯಿಂದ ವಿಷನರಿ ಲೀಡರ್‌ಶಿಪ್ ಅವಾರ್ಡ್ ಪಡೆದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.
ದ.ಕ. ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕ್ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಹೀಗೆಂದು ನಬಾರ್ಡ್ ಅಧ್ಯಕ್ಷರು ಮಂಗಳೂರು ಭೇಟಿ ವೇಳೆ ಪರಿಶೀಲನೆ ನಡೆಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ದೇಶದ 450 ಡಿಸಿಸಿ ಬ್ಯಾಂಕ್‌ಗಳ ಪೈಕಿ ನಮ್ಮ ಎಸ್‌ಸಿಡಿಸಿಸಿ ಬ್ಯಾಂಕ್ ಅಗ್ರಗಣ್ಯ ಸ್ಥಾನದಲ್ಲಿದೆ ಎಂದಿರುವುದಕ್ಕೆ ಗ್ರಾಹಕರು ಕ್ಲಪ್ತ ಸಮಯದಲ್ಲಿ ಸಾಲ ಮರು ಪಾವತಿಸುವುದೇ ಕಾರಣ. ಮುಂದೆ ಸಹಕಾರಿ ಕ್ಷೇತ್ರದಿಂದ ಎಲ್ಲವನ್ನೂ ಕಾರ್ಯರೂಪಕ್ಕೆ ತರುವ ದಿನ ಬರಲಿದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಶಾಭಾವನೆ ವ್ಯಕ್ತಪಡಿಸಿದರು.