ಸಹಕಾರಿ ರಂಗಕ್ಕೆ ಸರ್ಕಾರದ ಅನುದಾನ, ಉತ್ತೇಜನ ಬೇಕು: ಎಜ್.ಜಿ. ನಂಜಪ್ಪ

KannadaprabhaNewsNetwork |  
Published : Feb 18, 2024, 01:37 AM IST
ಸಹಕಾರ17 | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ಬೆಂಗಳೂರು), ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ (ಮೈಸೂರು), ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಇಲಾಖೆ ಸಹಯೋಗದಲ್ಲಿ ರಾಜ್ಯದ ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯದಕ್ಷತೆ ಕುರಿತು ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ ಉಡುಪಿಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸರ್ಕಾರದಿಂದ ಅಗತ್ಯ ಅನುದಾನ ಮತ್ತು ಸೂಕ್ತ ಸಹಕಾರ ಸಿಗದೇ ಸಹಕಾರಿ ಕ್ಷೇತ್ರ ಕುಂಠಿತವಾಗುತ್ತಿದೆ. ಮುಖ್ಯವಾಗಿ ಸಮುದ್ರ ಮೀನುಗಾರಿಕೆ ಮತ್ತು ಒಳನಾಡು ಮೀನುಗಾರಿಕೆಯ ಪ್ರಗತಿ, ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿಗೆ ಸರ್ಕಾರದ ಉತ್ತೇಜನ ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ (ಮೈಸೂರು) ಅಧ್ಯಕ್ಷ ಎಚ್.ಜಿ. ಮಂಜಪ್ಪ ಹೇಳಿದರು.

ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ಬೆಂಗಳೂರು), ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ (ಮೈಸೂರು), ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಇಲಾಖೆ ಸಹಯೋಗದಲ್ಲಿ ರಾಜ್ಯದ ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯದಕ್ಷತೆ ಕುರಿತು ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯದರ್ಶಿ ಲಕ್ಷ್ಮೀಪತಯ್ಯ ಮಾತನಾಡಿ, ಕರಾವಳಿಯಲ್ಲಿ ಸಹಕಾರಿ ವ್ಯವಸ್ಥೆ ವ್ಯವಸ್ಥಿತವಾಗಿದ್ದರೂ, ತೀವ್ರ ಪೈಪೋಟಿ ಎದುರಿಸುತ್ತಿದೆ. ಕಟ್ಟಿದ ಸಹಕಾರಿ ಸಂಘಗಳನ್ನು ಉಳಿಸೋದು ಕಷ್ಟಕರವಾಗಿದೆ. ಆದ್ದರಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.ವಿಧಾನಪರಿಷತ್ತಿನಲ್ಲಿ ಸಹಕಾರಿ ಕ್ಷೇತ್ರಕ್ಕೊಂದು ಪ್ರಾತಿನಿಧ್ಯತೆ, ಸಹಕಾರಿ ವಿವಿ ಸ್ಥಾಪನೆ ಸರ್ಕಾರದ ಮೇಲೆ ಒತ್ತಡ ಹೇಗಬೇಕಾದ ಅಗತ್ಯವಿದೆ ಎಂದು ತಿಳಿಸಿದರು.ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ಕೆ. ಮಹೇಶ್ವರಪ್ಪ, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ಸಿಇಒ ಹಾಲಪ್ಪ ಕೋಡಿಹಳ್ಳಿ, ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳದ ನಿರ್ದೇಶಕ ಅಂಜುಬಾಬು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ಮಂಜಯ್ಯ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಮನೋಜ್ ಕರ್ಕೇರ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಡಾ. ಗುರುಸ್ವಾಮಿ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ