ನಗರಸಭೆ ವತಿಯಿಂದ ನೀಟ್ ಪರೀಕ್ಷೆಗೆ ಕೋಚಿಂಗ್

KannadaprabhaNewsNetwork |  
Published : Apr 24, 2025, 12:06 AM IST

ಸಾರಾಂಶ

ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ಜೆಇಇ, ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ಕೋಚಿಂಗ್ ನೀಡಲು ಉದ್ದೇಶಿಸಿದ್ದು, ಇದೇ ಏಪ್ರಿಲ್ ೨೫ರ ಶುಕ್ರವಾರ ಇಲ್ಲಿನ ನಗರಸಭೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ

ರಾಮನಗರ: ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ಜೆಇಇ, ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ಕೋಚಿಂಗ್ ನೀಡಲು ಉದ್ದೇಶಿಸಿದ್ದು, ಇದೇ ಏಪ್ರಿಲ್ ೨೫ರ ಶುಕ್ರವಾರ ಇಲ್ಲಿನ ನಗರಸಭೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭಾಧ್ಯಕ್ಷ ಕೆ.ಶೇಷಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ೨೦೨೫- ೨೬ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ತರಬೇತಿ ಉಪಯುಕ್ತವಾಗಲಿದೆ. ಜೆಇಇ, ಸಿಇಟಿ ಮತ್ತು ನೀಟ್ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಅನುಕೂಲವಾಗುವಂತೆ ರಾಮನಗರ ನಗರಸಭೆ ಅಕ್ಕಾ ಐಎಎಸ್ ಅಕಾಡೆಮಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಏಪ್ರಿಲ್ ೨೫ರಂದು ಅಕ್ಕಾ ಐಎಎಸ್ ಅಕಾಡೆಮಿಯ ಸ್ಥಾಪಕರು ಹಾಗೂ ನಿರ್ದೇಶಕರಾದ ಡಾ.ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ ಬ್ರೈನ್ ಸ್ಟಾರ್ಮಿಂಗ್ ಸೆಷನ್ ನಡೆಸಲು ಉದ್ದೇಶಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬಹುದು ಎಂದು ನಗರಸಭಾಧ್ಯಕ್ಷರು ತಿಳಿಸಿದ್ದಾರೆ. ಮುಂದೆ ನಡೆಯುವ ತರಬೇತಿಗೆ ವಿದ್ಯಾರ್ಥಿಗಳು ಅಂದೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶವಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!