ಕರಾವಳಿಯ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಸೇವೆಯ ಬಗ್ಗೆ ಆಸಕ್ತಿ ವಹಿಸಿ: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Feb 09, 2025, 01:31 AM IST
8ಮೀನು | Kannada Prabha

ಸಾರಾಂಶ

ದ.ಕ. ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೊತ್ತದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ನಡೆಯಿತು.

1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ

ಕನ್ನಡಪ್ರಭ ವಾರ್ತೆ ಉಡುಪಿ

ಕರಾವಳಿ ಜಿಲ್ಲೆ ಶೈಕ್ಷಣಿಕ ಸಾಧನೆಯಲ್ಲಿ ನಿರಂತರ ಉತ್ತಮ ಸಾಧನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇಲ್ಲಿನ ವಿದ್ಯಾರ್ಥಿಗಳು ಎಂಜಿನಿಯರಿಂಗ್, ಐಟಿ, ವೈದ್ಯಕೀಯ ಕ್ಷೇತ್ರದ ಜೊತೆ ಜೊತೆಗೆ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭಾರತೀಯ ಆಡಳಿತ ಸೇವೆಯಲ್ಲಿಯೂ ಆಸಕ್ತಿ ವಹಿಸಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದರು.ದ.ಕ. ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೊತ್ತದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್. ಮಾತನಾಡಿ, ದೇಶದ ಭವ್ಯ ಭವಿಷ್ಯದ ಅಡಿಪಾಯವಾಗಿರುವ ವಿದ್ಯಾವಂತ ಯುವ ಜನತೆ ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕಿದೆ. ಫೆಡರೇಶನ್‌ನಂತಹ ಸಂಸ್ಥೆಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೀಡುತ್ತಿರುವ ಪ್ರೋತ್ಸಾಹವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಅಸ್ತಿಯಾಗುವ ಸಂಕಲ್ಪ ಮಾಡುವಂತೆ ಕರೆ ನೀಡಿದರು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ ಶುಭ ಹಾರೈಸಿದರು.ಸಂಪನ್ಮೂಲ ವ್ಯಕ್ತಿ, ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರೊ. ಡಾ.ನಿಕೇತನ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಶ್ರದ್ಧೆ ಹಾಗೂ ಶಿಸ್ತು ಮೈಗೂಡಿಸಿಕೊಂಡು ಸಾಧನೆ ಮೂಲಕ ಬದುಕು ರೂಪಿಸಿಕೊಳ್ಳಬೇಕು ಎಂದರು.ಸಮಾರಂಭದಲ್ಲಿ ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರಿ ಸಂಘ ಅಧ್ಯಕ್ಷ ರಾಮಚಂದ್ರ ಕುಂದರ್, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಅಳಸಮುದ್ರ ಮೀನುಗಾರಿಕಾ ಪ್ರಾ. ಸೇವಾ ಸಹಕಾರಿ ಸಂಘ ಅಧ್ಯಕ್ಷ ಸುಭಾಷ್ ಮೆಂಡನ್, ಪರ್ಸೀನ್ ಮೀನುಗಾರ ಸಂಘ ಅಧ್ಯಕ್ಷ ನಾಗರಾಜ ಸುವರ್ಣ, ತಾಂಡೇಲರ ಸಂಘ ಅಧ್ಯಕ್ಷ ರವಿರಾಜ್ ಸುವರ್ಣ, ಕನ್ನಿ ಮೀನುಗಾರರ ಸಂಘ ಅಧ್ಯಕ್ಷ ದಯಾಕರ ವಿ. ಸುವರ್ಣ, ಫೆಡರೇಶನ್ ಉಪಾಧ್ಯಕ್ಷ ದೇವಪ್ಪ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು. ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಫೆಡರೇಶನ್ ವ್ಯವಸ್ಥಾಪಕ ನಿರ್ದೇಶಕಿ ದರ್ಶನ್ ಕೆ.ಟಿ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!