ಡಿ.21ರಿಂದ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ

KannadaprabhaNewsNetwork |  
Published : Dec 15, 2024, 02:04 AM IST
ಬೆಳಗಾವಿಯಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ಸ್ಪೀಕರ್‌ ಮತ್ತು ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ | Kannada Prabha

ಸಾರಾಂಶ

ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಕರಾವಳಿ ಉತ್ಸವ ಸಿದ್ಧತೆಗಳ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಿಂದ ವಿಡಿಯೋ ಕಾನ್ಪೆರನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು.

ಕರಾವಳಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಾಂಸ್ಕೃತಿಕ ಕಲಾಪ್ರಕಾರಗಳು ಸೇರಿದಂತೆ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿರುವ ವಿವಿಧ ಅಕಾಡೆಮಿಗಳ ಸಹಯೋಗದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸ್ಪೀಕರ್ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಹಲವು ವರ್ಷಗಳ ಬಳಿಕ ಕರಾವಳಿ ಉತ್ಸವ ನಡೆಯುತ್ತಿರುವುದರಿಂದ ವಿವಿಧ ಸಾಂಸ್ಕೃತಿಕ ಮತ್ತು ಪ್ರಾಕೃತಿಕ ಆಕರ್ಷಣೀಯ ಕಾರ್ಯಕ್ರಮಗಳನ್ನು ನಡೆಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕರಾವಳಿ ಉತ್ಸವ ನಡೆಸಲು ಅಗತ್ಯ ಸಂಪನ್ಮೂಲಗಳನ್ನು ಸ್ಥಳೀಯವಾಗಿ ಕ್ರೋಢೀಕರಿಸಲು ಪ್ರಯತ್ನಿಸಬೇಕು. ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುದಾನವನ್ನು ಮಂಜೂರು ಮಾಡಲು ಗಮನಹರಿಸುವುದಾಗಿ ತಿಳಿಸಿದರು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಕರಾವಳಿ ಉತ್ಸವದೊಂದಿಗೆ ಪರಿಸರ ಮತ್ತು ಪ್ರಕೃತಿ ಸ್ನೇಹಿ ಕಾರ್ಯಕ್ರಮಗಳನ್ನು ನಡೆಸಬೇಕು. ಈ ನಿಟ್ಟಿನಲ್ಲಿ ಸಸ್ಯಮೇಳ ಆಯೋಜಿಸುವಂತೆ ತಿಳಿಸಿದರು.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಡಿಸೆಂಬರ್ 21ರಿಂದ ಕರಾವಳಿ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಜನವರಿ 18-19 ರಂದು ಗಾಳಿಪಟ ಉತ್ಸವ ನಡೆಯಲಿದೆ ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಂತೋಷ್‌ ಕುಮಾರ್, ಮೂಡಾ ಆಯುಕ್ತ ನೂರ್‌ಜಹಾನ್‌ ಮತ್ತಿತರರಿದ್ದರು.

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ