ಕಾಫಿ ಬೆಳೆಗಾರ ಮೇಲೆ ಸುಳ್ಳು ಪ್ರಕರಣ ಆರೋಪ: ಬಿಜೆಪಿ ಹೋರಾಟ ಎಚ್ಚರಿಕೆ

KannadaprabhaNewsNetwork |  
Published : Feb 17, 2024, 01:16 AM IST
32 | Kannada Prabha

ಸಾರಾಂಶ

ಕುಟ್ಟ, ಗೋಣಿಕೊಪ್ಪ ಮತ್ತು ಪಾಲಿಬೆಟ್ಟ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಜನರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಲಾಗಿದೆ. ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸುತ್ತಿರಲು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಪ್ರಮುಖ ಕಾರಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸೂಕ್ತ ತನಿಖೆ ನಡೆಸಿ ಅಮಾಯಕರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಎಸ್‌ಪಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ಎಚ್ಚರಿಸಿದೆ.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ಮತ್ತು ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯ ಹೊಂದಿದ್ದು, ಅನ್ಯೋನ್ಯವಾಗಿ ಬದುಕು ಸಾಗಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆಲವರ ಕುಮ್ಮಕ್ಕಿನಿಂದಾಗಿ ಕಾಫಿ ತೋಟದ ಮಾಲಿಕರ ಮೇಲೆ ಜಾತಿ ನಿಂದನೆ ಹಾಗೂ ಜೀತ ಪದ್ಧತಿ ಇದೆ ಎಂದು ಆರೋಪಿಸಿ ಪೊಲೀಸರು ದೂರು ದಾಖಲಿಸಿ ಕೊಂಡಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಆರೋಪಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕೊಡಗಿನ ಕುಟ್ಟ, ಗೋಣಿಕೊಪ್ಪ ಮತ್ತು ಪಾಲಿಬೆಟ್ಟ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಜನರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಲಾಗಿದೆ. ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸುತ್ತಿರಲು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಪ್ರಮುಖ ಕಾರಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸೂಕ್ತ ತನಿಖೆ ನಡೆಸಿ ಅಮಾಯಕರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಎಸ್‌ಪಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ ಕೊಟ್ಟಾಗ ಬಿಜೆಪಿ ಶಾಸಕರು ಕೊಡಗಿಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಜಿಲ್ಲೆಯ ಮೆಡಿಕಲ್ ಕಾಲೇಜು, ಸೈನಿಕ ಶಾಲೆ, ಇಂಜಿನಿಯರಿಂಗ್ ಕಾಲೇಜು, ಟರ್ಫ್ ಮೈದಾನಗಳು ಯಾರ ಕೊಡುಗೆ ಎಂದು ಸಿದ್ದರಾಮಯ್ಯ ಅವರು ಜನರಿಗೆ ತಿಳಿಸಲಿ. ಕೇವಲ ರಾಜಕೀಯ ಲಾಭಕ್ಕಾಗಿ ಆರೋಪ ಮಾಡುವ ಮನಸ್ಥಿತಿ ಬದಲಾಯಿಸಲಿ ಎಂದರು. ಬಿಜೆಪಿ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳ ಗುದ್ದಲಿ ಪೂಜೆ ಮಾಡುವುದು ಈಗಿನ ಶಾಸಕರ ಸಾಧನೆಯೇ ಹೊರತು ಜಿಲ್ಲೆಯ ಅಭಿವೃದ್ಧಿ ಶೂನ್ಯವಾಗಿದೆ ಎಂದು ಆರೋಪಿಸಿದರು. ಗುಡ್ಡಗಾಡು ಪ್ರದೇಶವಾದ ಕೊಡಗಿನಲ್ಲಿ ಸಾಂಪ್ರದಾಯಿಕವಾಗಿ ಪ್ರಾಚೀನ ಕಾಲದಿಂದಲೇ ವನ್ಯಪ್ರಾಣಿಗಳ ಉತ್ಪನ್ನಗಳ ಬಳಕೆ ಮಾಡಿ ಕೊಂಡು ಬರುತ್ತಿದೆ. ಆದರೆ ಜಿಲ್ಲೆಯ ಅರಣ್ಯ ಅಧಿಕಾರಿ ಇತ್ತೀಚೆಗೆ ವನ್ಯಪ್ರಾಣಿ ಉತ್ಪನ್ನ ಬಳಕೆ ಮಾಡುವವರ ವಿರುದ್ಧ ಕಾನುನು ಕ್ರಮ ಜರುಗಿಸುವುದಾಗಿ ಆದೇಶ ಹೊರಡಿಸಿದ್ದಾರೆ. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದರೂ, ಈ ಕುರಿತು ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿಸದೆ ಜಿಲ್ಲೆಯ ಜನತೆ ಭಯಪಡ ಬೇಡ ಎಂಬ ಹಾಸ್ಯಾಸ್ಪದ ಹೇಳಿಕೆ ನೀಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡರಾದ ಅನಿಲ್ ಶೆಟ್ಟಿ, ಎಂ.ಎ. ಆನಂದ, ಕೆ.ಆರ್‌. ಸತೀಶ್ ಮತ್ತು ರೀನಾ ತುಳಸಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌