ಸೋಮರಡ್ಡಿ ಅಳವಂಡಿ ಕೊಪ್ಪಳ
ಸರ್ಕಾರದ ಅಧೀನ ಕಾರ್ಯದರ್ಶಿ ಶಶಿಕಲಾ ಈ ಕುರಿತು ಆದೇಶ ಹೊರಡಿಸಿದ್ದು, ಸ್ಥಳೀಯವಾಗಿಯೇ ಆಡಳಿತಾಧಿಕಾರಿ ನೇಮಕ ಮಾಡಿಕೊಳ್ಳುವುದಕ್ಕೆ ಅವಕಾಶ ಇಲ್ಲ.ಸರ್ಕಾರದ ಮಂಜೂರಾತಿ ಇಲ್ಲದೆ ನೇಮಕ ಮಾಡಿಕೊಳ್ಳುವಂತೆ ಇಲ್ಲ. ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮಂಜೂರಾದ ಹುದ್ದೆಗಳಲ್ಲಿ ಆಡಳಿತಾಧಿಕಾರಿ ಹುದ್ದೆ ಇರುವುದಿಲ್ಲ.ಹೀಗಾಗಿ ಕೊಪ್ಪಳ ವಿವಿಯಲ್ಲಿ ಇದುವರೆಗೂ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ತಿಮ್ಮಾರಡ್ಡಿ ಮೇಟಿ ಅವರನ್ನುಈ ಕೂಡಲೇ ಬಿಡುಗಡೆ ಮಾಡಿ ಸರ್ಕಾರಕ್ಕೆ ವರದಿ ಮಾಡುವಂತೆ ಆದೇಶಿಸಲಾಗಿದೆ. ಈ ಕುರಿತು ಅಧಿಕೃತ ಪತ್ರವೇ ಕೊಪ್ಪಳ ವಿವಿ ಕುಲಪತಿಗಳಿಗೆ ಬಂದಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಾನುಸಾರ ತಿಮ್ಮಾರಡ್ಡಿ ಮೇಟಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಆದೇಶದ ವಿವಾದ: ಸರ್ಕಾರದ ಅಧೀನ ಕಾರ್ಯದರ್ಶಿ ಶಶಿಕಲಾ ಸಿ.ಅವರು ತಮ್ಮ ಆದೇಶ ಪ್ರತಿಯಲ್ಲಿ ಹಿರಿಯ ನಿವೃತ್ತ ಪ್ರಾಧ್ಯಾಪಕ ಡಾ.ಬಸವರಾಜ ಪೂಜಾರ ನೀಡಿದ ದೂರಿನ ಆಧಾರದ ಮೇಲೆ ಕ್ರಮ ವಹಿಸಿರುವ ಕುರಿತು ಉಲ್ಲೇಖ ಮಾಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.ಡಾ.ಬಸವರಾಜ ಪೂಜಾರ ಕನ್ನಡಪ್ರಭದೊಂದಿಗೆ ಮಾತನಾಡಿ, ನಾನು ಯಾವುದೇ ದೂರು ನೀಡಿಲ್ಲ. ಆದರೂ ಕೂಡಾ ಸರ್ಕಾರದ ಮುಖ್ಯಕಾರ್ಯದರ್ಶಿ ಶಶಿಕಲಾ ಸಿ. ಆಡಳಿತಾಧಿಕಾರಿ ಬಿಡುಗಡೆ ಮಾಡುವ ಆದೇಶದಲ್ಲಿ ನಾನು ದೂರು ಸಲ್ಲಿಸಿದ್ದು, ಅದರ ಆಧಾರದಲ್ಲಿಯೇ ಕ್ರಮಕೈಗೊಂಡಂತೆ ಆದೇಶ ಪತ್ರದಲ್ಲಿ ಹೇಳಿದ್ದಾರೆ.
ದೂರು ಕೊಟ್ಟವರ ಪತ್ತೆಯಾಗಲಿ: ಕೊಪ್ಪಳ ವಿವಿ ಆಡಳಿತಾಧಿಕಾರಿ ತೆಗೆದು ಹಾಕುವಂತೆ ದೂರು ಕೊಟ್ಟಿದ್ದು ಯಾರು ಎನ್ನುವುದು ಈಗ ಪತ್ತೆಯಾಗಬೇಕಾಗಿದೆ.ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ ದೂರದಾರನ ಹೆಸರನ್ನೇ ತಪ್ಪಾಗಿ ನೀಡಿ ದೂರು ಕೊಟ್ಟಿದ್ದು ಯಾರು ಎನ್ನುವುದು ಗೊತ್ತಾಗಬೇಕಾಗಿದೆ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ.
ಕೋಟ್
ನಾನು ಯಾರ ವಿರುದ್ಧವೂ ದೂರು ನೀಡಿಲ್ಲ. ಆದರೆ, ಸರ್ಕಾರದ ಆದೇಶದಲ್ಲಿ ನನ್ನ ಹೆಸರು ಉಲ್ಲೇಖವಾಗಿರುವುದು ನನಗೆ ಅಚ್ಚರಿಯಾಗಿದೆ. ಇದುವರೆಗೂ ನನಗೆ ಯಾವುದೇ ಮಾಹಿತಿಯೂ ಬಂದಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಬಸವರಾಜ ಪೂಜಾರ ತಿಳಿಸಿದ್ದಾರೆ.