ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿ: ಸತೀಶ್ ಜಾರಕಿಹೊಳಿ

KannadaprabhaNewsNetwork |  
Published : Oct 31, 2024, 12:56 AM IST
 ಪೊಟೋ ಪೈಲ್ ನೇಮ್ ೩೦ಎಸ್‌ಜಿವಿ೨   ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಕ್ಷೇತ್ರದ ಮುತ್ತಳ್ಳಿ, ಕಮಲಾನಗರ, ಅಡವಿ ಸೋಮಾಪೂರ, ಕುನ್ನೂರ, ಶ್ಯಾಡಂಬಿ, ತಿಮ್ಮಾಪುರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ  ಯಾಸೀರ್ ಅಹ್ಮದ್ ಖಾನ್ ಪಠಾಣ್ ಪರ ಮತಯಾಚನೆ ಮಾಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದರು | Kannada Prabha

ಸಾರಾಂಶ

ಬಿಜೆಪಿ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದ್ದು, ಕಾಂಗ್ರೆಸ್‌ಗೆ ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ನೀಡುವ ಮೂಲಕ ಸಾಮಾನ್ಯ ಜನರ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಕೋರಿದರು.

ಶಿಗ್ಗಾಂವಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಸಾಮಾನ್ಯ ಪ್ರಜೆಗೂ ಸಹಕಾರಿಯಾಗಿದ್ದು, ಗ್ರಾಮೀಣ ಪ್ರದೇಶ ಹಾಗೂ ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬುಧ‍ವಾರ ಕ್ಷೇತ್ರದ ಮುತ್ತಳ್ಳಿ, ಕಮಲಾನಗರ, ಅಡವಿ ಸೋಮಾಪುರ, ಕುನ್ನೂರ, ಶ್ಯಾಡಂಬಿ, ತಿಮ್ಮಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಪರ ಮತಯಾಚನೆ ಮಾಡಿ ಮಾತನಾಡಿದರು. ಬಿಜೆಪಿ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದ್ದು, ಕಾಂಗ್ರೆಸ್‌ಗೆ ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ನೀಡುವ ಮೂಲಕ ಸಾಮಾನ್ಯ ಜನರ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಕೋರಿದರು.

ಬಳಿಕ ಮಾತನಾಡಿದ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ಹಲವು ಯೋಜನೆ ಜಾರಿ ಮಾಡಿದೆ. ಇಂದಿರಾ ಗಾಂಧಿ ಅವರ ಉಳುವವನೇ ಭೂಮಿಯ ಒಡೆಯ ಸೇರಿ ಹಲವು ಯೋಜನೆಗಳು ಬಡ ಕುಟುಂಬಗಳಿಗೆ ಆಧಾರಸ್ತಂಭವಾಗಿದ್ದು, ಬಡವರ ಪರ ಕಾಂಗ್ರೆಸ್ ಸರ್ಕಾರದ ನಿಲುವುಗಳಿವೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್, ಅಲ್ತಾಫ್ ಹಳ್ಳೂರ್, ಕಿರಣ್ ಪಾಟೀಲ್, ಬಾಬರ್ ಬವಾಜಿ, ಎಸ್.ಎಫ್. ಮನಕಟ್ಟಿ, ಶಿವಾನಂದ ರಾಮಗಿರಿ, ಪರಶುರಾಮ ಕಾಳಿ, ಕಲ್ಲಪ್ಪ ಬಿರೊಳ್ಳಿ, ಯಲ್ಲಪ್ಪ ನವಲೂರ್, ಆನಂದ ಲಮಾಣಿ, ಈರಪ್ಪ ಪೂಜಾರ್, ನಾಗರಾಜ್ ಗೌರಿ, ಶಾಹಜಮಾನ್ ಮುಜಾಹಿದ್, ಮೆಹಬೂಬ್ ರಾಮದುರ್ಗ, ಸಂತೋಷ ಚಾಕಲಬ್ಬಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ವರ್ಷ: ದೇವಾಲಯಗಳಿಗೆ ಭಕ್ತರ ದಾಂಗುಡಿ
ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?