ಕನ್ನಡಪ್ರಭ ವಾರ್ತೆ, ಚಾಮರಾಜನಗರ
ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ೩೦ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳೊಂದಿಗೆ ತೆರಿಗೆ ವಸೂಲಾತಿ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಸಾರ್ವಜನಿಕರು ಕುಡಿಯುವ ನೀರು, ಅಂಗಡಿ ಮಳಿಗೆ, ವಿದ್ಯುಚ್ಛಕ್ತಿ, ವಸತಿ ಹಾಗೂ ಸರ್ಕಾರಿ-ಸಾರ್ವಜನಿಕ ಆಸ್ತಿಗಳಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿಸಬೇಕಾಗಿದ್ದು, ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿರುವ ಸರ್ಕಾರಿ ಆಸ್ತಿಗಳಿಗೆ ಅನುಗುಣವಾಗಿ ತೆರಿಗೆ ವಸೂಲಾತಿ ಮಾಡಬೇಕು ಎಂದರು.ತೆರಿಗೆ ವಸೂಲಾತಿ ಅಭಿಯಾನದ ಮೂಲಕ ಪ್ರತಿನಿತ್ಯದ ಆನ್‌ಲೈನ್ ಪ್ರಗತಿಯನ್ನು ಪರಿಶೀಲನೆ ಮಾಡಲಾಗಿದ್ದು, ತೆರಿಗೆ ವಸೂಲಾತಿಗೆ ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡರೂ ಸಹ ಕೆಲ ಗ್ರಾಮ ಪಂಚಾಯಿತಿಗಳು ನಿಗದಿತ ಗುರಿ ಸಾಧಿಸದೇ ತೆರಿಗೆ ವಸೂಲಾತಿಯಲ್ಲಿ ಹಿನ್ನಡೆ ಅನುಭವಿಸಿವೆ. ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ ಗ್ರಾಮ ಪಂಚಾಯಿತಿವಾರು ನಿಗದಿಪಡಿಸಲಾಗಿರುವ ಬೇಡಿಕೆಗನುಗುಣವಾಗಿ ಶೇ.೧೦೦ರಷ್ಟು ತೆರಿಗೆ ವಸೂಲಾತಿ ಮಾಡಬೇಕು. ಈ ಸಂಬಂಧ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡಂತೆ ಪ್ರತಿ ಬುಧವಾರ ಹಾಗೂ ಶುಕ್ರವಾರಗಳಂದು ವಿಶೇಷ ತೆರಿಗೆ ವಸೂಲಾತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಉದ್ಯೋಗ ಖಾತರಿ ಯೋಜನೆ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಉದ್ಯೋಗ ಖಾತರಿ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳಡಿ ಹಣಪಾವತಿಗೆ ಸಂಬಂಧಿಸಿದಂತೆ ಡ್ಯಾಂಗಲ್ ಬಗೆಗಿನ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಬೇಕು. ಅನುದಾನ ವ್ಯಪಗತವಾಗದಂತೆ ಕಾಲಕಾಲಕ್ಕೆ ಹಣಪಾವತಿಗೆ ಅಗತ್ಯ ಕ್ರಮ ವಹಿಸಬೇಕು. ಏನಾದರೂ ಸಮಸ್ಯೆಗಳಿದ್ದಲ್ಲಿ ಸಂಬಂಧಿಸಿದ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಜಿಲ್ಲಾ ಪಂಚಾಯಿತಿಯ ಗಮನಕ್ಕೆ ತರುವಂತೆ ಜಿ.ಪಂ. ಸಿಇಒ ಅವರು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರಿಕಂಠರಾಜೇ ಅರಸ್, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.