ಗ್ರಾಮಗಳಲ್ಲಿ ಕರ ವಸೂಲಾತಿ ಮಾಡಿ

KannadaprabhaNewsNetwork |  
Published : Jan 01, 2026, 02:45 AM IST
 31ಸಿಎಚ್‌ಎನ್‌53ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ  ತಾಲೂಕು ಪಂಚಾಯತಿ  ಸಹಾಯಕ ನಿರ್ದೇಶಕರಾದ ರವೀಂದ್ರರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡ ಪ್ರಭ ವಾರ್ತೆ, ಯಳಂದೂರು

ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಬಿಲ್ ಕಲೆಕ್ಟರ್ , ಕಂಪ್ಯೂಟರ್ ಆಪರೇಟರ್ ಜೊತೆ ಸಮಾಲೋಚನೆ ನಡೆಸಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಡ್ಡಾಯವಾಗಿ ಮನೆ ಕಂದಾಯ ನೀರಿನ ಕಂದಾಯ ವಸಲಾತಿ ಮಾಡಿಸಬೇಕು ಎಂದರು.

ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಗ್ರಾಮ ಪಂಚಾಯಿತಿಗೆ ಅಗತ್ಯ ಕಂದಾಯ ವಸೂಲಾತಿ ಮಾಡುವ ಮೂಲಕ ನೌಕರಿಗೆ ಸಂಬಳ ನೀಡುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನರೇಗಾ ಯೋಜನೆ ಕಾಮಗಾರಿ ಸಮರ್ಪಕವಾಗಿ ನಿರ್ವಹಣೆ ಮಾಡದಿದ್ದರೆ ಶಿಸ್ತು ಕ್ರಮ ಷ್ಟು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವಣ್ಣ, ಬಿಲ್ ಕಲೆಕ್ಟರ್ ಗೋವಿಂದರಾಜ್, ಕಂಪ್ಯೂಟರ್ ಆಪರೇಟರ್ ಉಷಾ, ಸೇರಿದಂತೆ ಸಾರ್ವಜನಿಕರು, ಗ್ರಾಮ ಪಂಚಾಯತಿಯ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೂಪಾ ಮೌದ್ಗಿಲ್‌ ಮಾನಹಾನಿ ಕೇಸ್‌: ರೋಹಿಣಿ ಅರ್ಜಿ ವಜಾ
ವಿರೋಧದ ನಡುವೆ ಮದುವೆ : ಸಿಟ್ಟಲ್ಲಿ ಅಳಿಯನ ಮನೆಗೆ ಮಾವನಿಂದ ಬೆಂಕಿ!