ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿ ಸಂಗ್ರಹ

KannadaprabhaNewsNetwork |  
Published : Jul 02, 2026, 01:30 AM IST
೧ಕೆಎಂಎನ್‌ಡಿ-೩ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣ ಕಾರ್ಯ ಆರಂಭಗೊಂಡ ಹಿನ್ನೆಲೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್.ಅರ್ಚನಾ ಅವರು ಖುದ್ದಾಗಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣ ಕಾರ್ಯ ಆರಂಭಗೊಂಡ ಹಿನ್ನೆಲೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್.ಅರ್ಚನಾ ಅವರಿಂದ ಖುದ್ದಾಗಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲನೆ.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹಣೆ ಕಾರ್ಯ ಬುಧವಾರದಿಂದ (ಜುಲೈ ೦೧) ಆರಂಭಗೊಂಡಿದ್ದು, ಗ್ರಾಹಕರು ಸಹಕರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ಕೋರಿದ್ದಾರೆ.

೨೦೨೩ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಸೆಸ್ಕ್‌ನ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಹಾಗೂ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.

ಸೆಸ್ಕ್ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಆಧಾರ್‌ ಕಾರ್ಡ್, ಫಲಾನುಭವಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್ ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ)

ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಅನ್ವಯಿಸುವಲ್ಲಿ ಮಾತ್ರ) ನೀಡುವಂತೆ ತಿಳಿಸಿದ್ದಾರೆ.

ಈ ಪ್ರಕ್ರಿಯೆಗೆ ಮೀಟರ್ ರೀಡರ್‌ಗಳ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದೆ. ಗ್ರಾಹಕರು ಮತ್ತು ಫಲಾನುಭವಿಗಳು ಸೆಸ್ಕ್‌ನ ಅಧಿಕೃತ ಮೀಟರ್ ರೀಡರ್‌ಗಳ ಗುರುತಿನ ಚೀಟಿಯನ್ನು ಪರಿಶೀಲಿಸಿ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೋರಿದೆ.

ಸೆಸ್ಕ್ ತಾಂತ್ರಿಕ ನಿರ್ದೇಶಕ ಎಲ್.ಲೋಕೇಶ್, ಮುಖ್ಯ ಆರ್ಥಿಕ ಅಧಿಕಾರಿ ಜಿ.ರೇಣುಕಾ, ಪ್ರಧಾನ ವ್ಯವಸ್ಥಾಪಕ ಆರ್. ರಾಮಸ್ವಾಮಿ, ಅಧೀಕ್ಷಕ ಎಂಜಿನಿಯರ್ ಸುನಿಲ್‌ಕುಮಾರ್, ಅಧಿಕಾರಿಗಳಾದ ಸುಭಾಷ್, ರಮೇಶ್, ಇಂದ್ರಾಣಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೌಗೋಳಿಕ ಸಂಪತ್ತು ಸದ್ಬಳಕೆ ಆದಾಗ ಮಾತ್ರವೇ ಅಭಿವೃದ್ಧಿ
ಕೆಪಿಟಿಸಿಎಲ್ ಖಾಸಗೀಕರಣ ಯತ್ನ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ರೈತ ಸಂಘ