ಹಾರೋಹಳ್ಳಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಜನರಿಗೆ ನೀಡಿದ ಆಶ್ವಾಸನೆಯಂತೆ 5 ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವ ನಿಧಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೇಳಿದರು.
ತಾಲೂಕಿನ ಮೇಡಮಾರನಹಳ್ಳಿ ಗ್ರಾಮದಲ್ಲಿ ಸರ್ಕಾರದ ಐದು ಗ್ಯಾರಂಟಿಗಳು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಸೌಲಭ್ಯ ಸಿಗದಿದ್ದಲ್ಲಿ ಕಾರಣ ತಿಳಿದು ಸೌಲಭ್ಯವನ್ನು ಒದಗಿಸುವುದಕ್ಕೆ ಮನೆಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಅವರು ಮಾತನಾಡಿದರು.ಕಾಂಗ್ರೆಸ್ ಸರ್ಕಾರ ಜನರಿಗೆ ಅನುಕೂಲವಾಗಲೆಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಹಾಗೂ ರಾಮನಗರ ಕ್ಷೇತ್ರದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿದ್ದಾರೆ ಎಂದು ತಿಳಿಸಿದರು.
ಮೇಡಮಾರನಹಳ್ಳಿ ಕಾಂಗ್ರೆಸ್ ಮುಖಂಡ ಎಂ.ಡಿ.ಸುರೇಶ್ ಮಾತನಾಡಿ, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಶಾಸಕ ಇಕ್ಬಾಲ್‌ಹುಸೇನ್ ರವರು ರಾಮನಗರ ಕ್ಷೇತ್ರದ ಜನತೆಗೆ ಹೆಚ್ಚಿನ ಅಭಿವೃದ್ಧಿ ಕೆಲಸವನ್ನು ಮಾಡಲು ಮುಂದಾಗಿದ್ದಾರೆ. ಹಾರೋಹಳ್ಳಿ ಹಾಗೂ ಮರಳವಾಡಿ ಭಾಗದ ಜನತೆಗೆ ಮನೆಮನೆಗೆ ಕಾವೇರಿ ಕುಡಿಯುವ ನೀರಿನ ವ್ಯವಸ್ಥೆ, ಹಾರೋಹಳ್ಳಿ ಭಾಗದಲ್ಲಿ 24 ಗಂಟೆಗಳ ಕಾಲ ಕಾವೇರಿ ಕುಡಿಯುವ ನೀರಿನ ವ್ಯವಸ್ಥೆ, ಕಾಡಾನೆ ದಾಳಿಯನ್ನು ತಡೆಯಲು ಬ್ಯಾರಿಗೇಡ್ ವ್ಯವಸ್ಥೆ, ರಸ್ತೆ ಹಾಗೂ ಚರಂಡಿ, ಸೇತುವೆಗಳು ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆಲಾಗಿದೆ ಎಂದು ಹೇಳಿದರು.ಕಾಂಗ್ರೆಸ್ ಮುಖಂಡರಾದ ಕೆ.ಪಿ.ನಾಗರಾಜ್, ನಂಜೇಗೌಡ, ರವಿ, ಮಾಜಿ ಸದಸ್ಯ ಮುತ್ತುರಾಜು, ಸಿದ್ದರಾಜು, ಮೋಹನ್, ವಿನಯ್ ಮತ್ತಿತರರು ಹಾಜರಿದ್ದರು.9ಕೆಆರ್ ಎಂಎನ್ 3.ಜೆಪಿಜಿ
ಹಾರೋಹಳ್ಳಿ ತಾಲೂಕಿನ ಮೇಡಮಾರನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಐದು ಗ್ಯಾರಂಟಿಗಳು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಸೌಲಭ್ಯ ಸಿಗದಿದ್ದಲ್ಲಿ ಕಾರಣ ತಿಳಿದು ಸೌಲಭ್ಯವನ್ನು ಒದಗಿಸುವುದಕ್ಕೆ ಮನೆಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.