ಹಸಿರು, ಸ್ವಸ್ಥ, ಪರಿಸರಸ್ನೇಹಿ ದೀಪಾವಳಿ ಆಚರಿಸಲು ಜಿಲ್ಲಾಧಿಕಾರಿ ಮನವಿ

KannadaprabhaNewsNetwork |  
Published : Oct 26, 2024, 12:50 AM IST
32 | Kannada Prabha

ಸಾರಾಂಶ

ಜಿಲ್ಲಾಡಳಿತವು 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲಾಡಳಿತವು 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.ಈ ಉದ್ದೇಶದಿಂದ ಈ ಕೆಳಗಿನ ಸೂಚನೆಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ:

ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯಬೇಕು.

25 ಡೆಸಿಬಲ್‌ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.

ಹಸಿರು ನ್ಯಾಯ ಪೀಠ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್‌ ಕೋಡ್ ಇರುವ ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡುವುದು.

ದಿನದ ಯಾವುದೇ ಸಮಯದಲ್ಲಿ ನಿಶಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆ ನಿಷೇಧಿಸಲಾಗಿದೆ.

ಈ ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಆದ್ದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು ‘ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ’ಯಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?