-ಜಿಟಿಟಿಸಿ ಕಾಲೇಜಿನ ಪ್ರಾಂಶುಪಾಲರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್
------ಕನ್ನಡಪ್ರಭವಾರ್ತೆ, ಚಿತ್ರದುರ್ಗ
ಚಳ್ಳಕೆರೆ ಹಾಗೂ ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪಿಯುಸಿ, ಐಟಿಐ ಕಾಲೇಜು ಹಾಗೂ ಜಿಟಿಟಿಸಿ ಕಾಲೇಜಿನ ಪ್ರಾಂಶುಪಾಲರ ಸಭೆ ನಡೆಯಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಚಿತ್ರದುರ್ಗ ಬಯಲುಸೀಮೆಯಾಗಿದ್ದು, ಆರ್ಥಿಕತೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಜಿಟಿಟಿಸಿಯಲ್ಲಿ ಡಿಪ್ಲೊಮಾ ಕೋರ್ಸ್ ಗಳನ್ನು ಮಾಡುವುದರಿಂದ ಹೆಚ್ಚಿನ ಕೌಶಲ್ಯ ಪಡೆದು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದು. ಸ್ವಂತ ಕೈಗಾರಿಕೆ ಪ್ರಾರಂಭಿಸಬಹುದು. ಹೊರದೇಶಗಳಲ್ಲಿಯೂ ಈ ಸಹ ಈ ಕೋರ್ಸ್ ಗೆ ಬಹಳ ಬೇಡಿಕೆ ಇದೆ. ನಿರುದ್ಯೋಗ ಸಮಸ್ಯೆ ಅಳಿಸಬಹುದು ಎಂದು ತಿಳಿಸಿದರು.ಜಿಟಿಟಿಸಿ ಕೇಂದ್ರದ ಉಪ ವ್ಯವಸ್ಥಾಪಕ ಎಸ್.ಲಕ್ಷ್ಮಣ್ ನಾಯ್ಕ್ ಮಾತನಾಡಿ, ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಜಿಟಿಟಿಸಿ ಪ್ರವೇಶ ಪಡೆಯಬಹುದು. ಪಿಯುಸಿ ವಿಜ್ಞಾನ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜಿಟಿಟಿಸಿ ಕೋರ್ಸ್ ಗಳಿಗೆ 2ನೇ ವರ್ಷಕ್ಕೆ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ ಕಲ್ಪಿಸಲಾಗಿದೆ. ಜಿಟಿಟಿಸಿ ಕೇಂದ್ರದಲ್ಲಿ ಟೂಲ್ ಮತ್ತು ಡೈ ಮೇಕಿಂಗ್, ಮೆಕಾಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್, ಡಿಪ್ಲೋಮಾ ಇನ್ ಪ್ರೀ ಸಿಸನ್ ಮ್ಯಾನ್ಯುಫ್ಯಾಕ್ಚರಿಂಗ್ ಕೋರ್ಸ್ ಗಳಿಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ಪಡೆಯಬಹುದು ಎಂದು ಮಾಹಿತಿ ನೀಡಿದರು.
ಚಳ್ಳಕೆರೆ ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲ ತಿಪ್ಪೇಸ್ವಾಮಿ, ಚಿತ್ರದುರ್ಗ ಜಿಟಿಟಿಸಿ ಕೇಂದ್ರ ಪ್ರಾಂಶುಪಾಲ ಸುಹಾಸ್, ಆಡಳಿತಾಧಿಕಾರಿ ಕೆ.ಪಿ.ಕಾಟೇಗೌಡ ಹಾಗೂ ಜಿಲ್ಲೆಯ ಐಟಿಐ ಹಾಗೂ ಪಿಯು ಕಾಲೇಜಿನ ಪ್ರಾಂಶುಪಾಲರು ಇದ್ದರು.---------
ಪೋಟೊ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಪಿಯುಸಿ, ಐಟಿಐ ಕಾಲೇಜು ಹಾಗೂ ಜಿಟಿಟಿಸಿ ಕಾಲೇಜಿನ ಪ್ರಾಂಶುಪಾಲರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.------
ಪೋಟೋ: 30 ಸಿಟಿಡಿ 2