ಡೀಮ್ಡ್ ಅರಣ್ಯ ಪ್ರದೇಶ ಸರ್ವೇಗೆ ಜಿಲ್ಲಾಧಿಕಾರಿ ಸೂಚನೆ

KannadaprabhaNewsNetwork |  
Published : Aug 29, 2024, 12:47 AM IST
ಫೋಟೋ- ಫಾರೆಸ | Kannada Prabha

ಸಾರಾಂಶ

ರಾಜ್ಯ ಸರ್ಕಾರ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ಡೀಮ್ಡ್ ಅರಣ್ಯ ಪ್ರದೇಶವನ್ನು ಕಂದಾಯ, ಅರಣ್ಯ, ಭೂದಾಖಲೆಗಳ ಇಲಾಖೆಯು ಜಂಟಿಯಾಗಿ ಸರ್ವೇ ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ರಾಜ್ಯ ಸರ್ಕಾರ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ಡೀಮ್ಡ್ ಅರಣ್ಯ ಪ್ರದೇಶವನ್ನು ಕಂದಾಯ, ಅರಣ್ಯ, ಭೂದಾಖಲೆಗಳ ಇಲಾಖೆಯು ಜಂಟಿಯಾಗಿ ಸರ್ವೇ ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಈ ಸಂಬಂಧ ತಮ್ಮ ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರರು, ಡಿಡಿಎಆರ್, ಎಡಿಎಲ್ಆರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು 3-4 ತಿಂಗಳ ಒಳಗಾಗಿ ವಾಸ್ತವ ವರದಿ ನೀಡುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಕಾಯ್ದಿಟ್ಟ ಅರಣ್ಯ ಪ್ರದೇಶ ಘೋಷಣೆಗೆ ಪೂರಕವಾಗಿ ಕರ್ನಾಟಕ ಅರಣ್ಯ ಕಾಯ್ದೆ-1963 ಸೆಕ್ಷನ್ 4ರ ಪ್ರಕಾರ ಜಿಲ್ಲೆಯಲ್ಲಿ 25 ಅರಣ್ಯ ಪ್ರದೇಶಗಳನ್ನು ಅಧಿಸೂಚಿಸಿದ್ದು, ಇದರಲ್ಲಿ ಪ್ರಗತಿಯಲ್ಲಿರುವ 8 ಪ್ರದೇಶಗಳ ಕುರಿತು ಕೂಡಲೆ ಕಂದಾಯ ಉಪ ವಿಭಾಗದ ಸಹಾಯಕ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದಲ್ಲಿ ಸೆಕ್ಷನ್-17ರಂತೆ ಕಾಯ್ದಿಟ್ಟ ಅರಣ್ಯ ಪ್ರದೇಶ ಘೋಷಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಇನ್ನು ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಸಂರಕ್ಷಣೆ ನಿಟ್ಟಿನಲ್ಲಿ ಕೆಲವು ಗ್ರಾಮಗಳಲ್ಲಿ ಪಹಣಿ, ಮೊಟೇಷನ್‌ನಲ್ಲಿ ಮಾಲೀಕತ್ವದ ಬಗ್ಗೆ ತಕರಾರು ಇದ್ದು, ಇದನ್ನು ತಹಸೀಲ್ದಾರರು, ಆರ್‌ಎಫ್ಓಗಳು ಸರಿಪಡಿಸಬೇಕೆಂದು ಡಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಸಹಾಯಕ ಆಯುಕ್ತೆ ರೂಪಿಂದರ್ ಸಿಂಗ್ ಕೌರ್, ಪ್ರಭುರೆಡ್ಡಿ, ತಾಲೂಕಿನ ತಹಸೀಲ್ದಾರರು, ಎಡಿಎಲ್ಆರ್ ಭಾಗಿಯಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!