ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

KannadaprabhaNewsNetwork |  
Published : Dec 26, 2025, 02:01 AM IST
23ಕೆಆರ್ ಎಂಎನ್ 5.ಜೆಪಿಜಿರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ (ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಕಾಯ್ದೆ -2015ರ ಅನುಷ್ಠಾನ ಸಂಬಂಧ ಸಭೆ ನಡೆಯಿತು. | Kannada Prabha

ಸಾರಾಂಶ

ರಾಮನಗರ: ಪರಿಸರ ರಾಯಭಾರಿ ದಿವಂಗತ ಸಾಲುಮರದ ತಿಮ್ಮಕ್ಕ ಅವರು ವಾಸವಿದ್ದ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚಿಸಿದರು.

ರಾಮನಗರ: ಪರಿಸರ ರಾಯಭಾರಿ ದಿವಂಗತ ಸಾಲುಮರದ ತಿಮ್ಮಕ್ಕ ಅವರು ವಾಸವಿದ್ದ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ (ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಕಾಯ್ದೆ -2015ರ ಅನುಷ್ಠಾನ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹುಲಿಕಲ್ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಮಾಗಡಿ ತಹಸೀಲ್ದಾರ್ ಹುಲಿಕಲ್ ಗ್ರಾಮದ ಸರ್ವೇ ನಂಬರ್ 127ರಲ್ಲಿ 1-13 ಎ/ಗುಂಟೆ ಜಮೀನನ್ನು ಆಶ್ರಯ ಯೋಜನೆಗಾಗಿ ಮಂಜೂರಾತಿ ಮಾಡಲು ಸ್ಥಳ ಗುರುತಿಸಿ, ಪ್ರಸ್ತಾವನೆಯನ್ನು ರಾಮನಗರ ಉಪ ವಿಭಾಗಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ಆಶ್ರಯ ಯೋಜನೆಯಡಿ ನಿವೇಶನ ನೀಡಲಾಗುವುದು ಎಂದು ತಿಳಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ರಾಮನಗರ ತಾಲೂಕು ಕಸಬಾ ಹೋಬಳಿಯ ಅರ್ಚಕರ ಹಳ್ಳಿ ಗ್ರಾಮದ ಸರ್ವೆ ನಂಬರ್ 104 ರಲ್ಲಿ ಕಾಯ್ದಿರಿಸಲಾಗಿರುವ 30 ಗುಂಟೆ ಜಮೀನಿಗೆ ಆರ್.ಟಿ.ಸಿ ಮಂಜೂರಾಗಿದ್ದು, ಭವನ ನಿರ್ಮಾಣಕ್ಕೆ ಸಂಬಂಧಿಸಿದ ಇಲಾಖೆಯವರು ಕೂಡಲೇ ಕ್ರಮ ವಹಿಸಬೇಕು ಹಾಗೂ ಮಾಗಡಿ ತಾಲೂಕಿನ ನೇರಳೇಕೆರೆ ಗ್ರಾಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು 10 ಗುಂಟೆ ಜಮೀನನ್ನು ಗುರುತಿಸುವಂತೆ ತಹಸೀಲ್ದಾರರಿಗೆ ಸೂಚಿಸಿದರು.

ರಾಮನಗರ ತಾಲೂಕಿನ ಪಾಲಭೋವಿದೊಡ್ಡಿಯಲ್ಲಿ ಪರಿಶಿಷ್ಟ ಜಾತಿಯವರು ಬಳಕೆ ಮಾಡುತ್ತಿರುವ ಸ್ಮಶಾನ ಭೂಮಿಯ ಒತ್ತುವರಿಯಾಗಿದ್ದು, ಆ ಸ್ಮಶಾನ ಭೂಮಿಯನ್ನು ಸರ್ವೇ ಮಾಡಿ ಒತ್ತುವರಿಯನ್ನು ತೆರವುಗೊಳಿಸುವಂತೆ ತಹಸೀಲ್ದಾರರು ಹಾಗೂ ಭೂ ಮಾಪನಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಕಚೇರಿಗಳಿಗೆ ಸಮಸ್ಯೆಗಳ ಪರಿಹಾರಕ್ಕೆಂದು ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಸಮಸ್ಯೆಗಳನ್ನು ಸ್ಪಷ್ಟವಾಗಿ ಆಲಿಸಿ, ವಿಳಂಬಕ್ಕೆ ಆಸ್ಪದ ನೀಡದಂತೆ ಕಾನೂನು ವ್ಯಾಪ್ತಿಯಲ್ಲಿ ಅವುಗಳನ್ನು ಶೀಘ್ರ ಇತ್ಯರ್ಥ ಪಡಿಸಿ ಸಂತ್ರಸ್ಥರಿಗೆ ಪರಿಹಾರ ಕಲ್ಪಿಸಿಕೊಡಬೇಕು ಎಂದ ಅವರು ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ದೌರ್ಜನ್ಯ ಪ್ರತಿಬಂಧ ಕಾಯ್ದೆ ಕುರಿತು ವಿವರವುಳ್ಳ ಕರಪತ್ರಗಳನ್ನು ಮುದ್ರಿಸಿ ಠಾಣೆಗೆ ಭೇಟಿ ನೀಡುವವರಿಗೆ ಅರಿವು ಮೂಡಿಸಬೇಕೆಂದು ಯಶವಂತ್ ವಿ.ಗುರುಕರ್ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ಎಎಸ್ಪಿ ರಾಮಚಂದ್ರಯ್ಯ, ಉಪವಿಭಾಗಾಧಿಕಾರಿ ಬಿನೋಯ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಚೆಲುವರಾಜು, ಕುಂಬಾಪುರ ಬಾಬು, ಗೋಪಾಲ ಕೃಷ್ಣ, ಮಹೇಶ್, ಶಿವಣ್ಣ, ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

23ಕೆಆರ್ ಎಂಎನ್ 5.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ (ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಕಾಯ್ದೆ -2015ರ ಅನುಷ್ಠಾನ ಸಂಬಂಧ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಟಲ್‌ ಬಿಹಾರಿ ವಾಜಪೇಯಿ ನವಭಾರತದ ಶಿಲ್ಪಿ: ವಿಪ ಸದಸ್ಯ ಸಿ.ಟಿ. ರವಿ
ಸತ್ಕರ್ಮ,ಸದ್ವಿಚಾರದಿಂದ ಮೋಕ್ಷ: ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ