ಲಕ್ಷಾನಟ್ಟಿ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಭೇಟಿ

KannadaprabhaNewsNetwork |  
Published : Mar 25, 2024, 12:52 AM IST
ಲೋಕಾಪುರ | Kannada Prabha

ಸಾರಾಂಶ

ಲೋಕಾಪುರ: ಲೋಕಾಪುರ ಬಳಿ ಇರುವ ಲಕ್ಷಾನಟ್ಟಿ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭೇಟಿ ನೀಡಿ ಚೆಕ್ ಪೋಸ್ಟನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಾರ್ಯವೈಖರಿ, ತಪಾಸಣೆ ಮಾಡಲಾದ ವಾಹನಗಳ ಮಾಹಿತಿಗಳನ್ನೊಳಗೊಂಡ ಮಾಹಿತಿ ಪಡೆದರು.

ಕನ್ನಡಪ್ರಭ ವಾರ್ತೆ ಲೋಕಾಪುರ

ಲೋಕಾಪುರ ಬಳಿ ಇರುವ ಲಕ್ಷಾನಟ್ಟಿ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭೇಟಿ ನೀಡಿ ಚೆಕ್ ಪೋಸ್ಟನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಾರ್ಯವೈಖರಿ, ತಪಾಸಣೆ ಮಾಡಲಾದ ವಾಹನಗಳ ಮಾಹಿತಿಗಳನ್ನೊಳಗೊಂಡ ಮಾಹಿತಿ ಪಡೆದರು.

ಚೆಕ್ ಪೋಸ್ಟ್‌ಗಳ ಮೂಲಕ ಹಾದು ಹೋಗುವ ಪ್ರತಿ ವಾಹನಗಳ ತಪಾಸಣೆ ನಡೆಸಬೇಕು. ಚುನಾವಣೆ ಹಿನ್ನೆಲೆ ವಾಹನ ತಪಾಸಣೆ ನಡೆಸುತ್ತಿರುವ ಕುರಿತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಸಾರ್ವಜನಿಕರೊಂದಿಗೆ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು. ಚುನಾವಣಾ ಕರ್ತವ್ಯದಲ್ಲಿ ಲೋಪಕ್ಕೆ ಆಸ್ಪದ ನೀಡಬಾರದು. ಪರಸ್ಪರ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಆಕ್ರಮ ಕಂಡು ಬಂದರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸುವಂತೆ ಅವರು ತಿಳಿಸಿದರು.

ದಾಖಲೆಗಳಿಲ್ಲದ ನಗದು, ಸಾಮಗ್ರಿ, ಚಿನ್ನಾಭರಣ, ಮದ್ಯ ಹಾಗೂ ವಾಣಿಜ್ಯ ಸರಕುಗಳನ್ನು ವಾಹನಗಳಲ್ಲಿ ಸಾಗಾಟ ಮಾಡುವುದನ್ನು ಪರಿಶೀಲಿಸಬೇಕು. ದಾಖಲೆ ರಹಿತ ಸಾಮಗ್ರಿ, ನಗದು ದೊರೆತರೆ ನಿಯಮಾನುಸಾರ ಪ್ರಕರಣ ದಾಖಲಿಸುವಂತೆ ಚೆಕ್ ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ವೇಳೆ ಚೆಕ್ ಪೋಸ್ಟನಲ್ಲಿ ಎಸ್‌ಎಸ್‌ಟಿ ತಂಡದ ಮುಖ್ಯಸ್ಥ ಚನ್ನಬಸವ ಮಾಚನೂರ, ಎಫ್‌ಎಸ್‌ಟಿ ಮಂಜುನಾಥ ಜಾಡರ, ಅರಣ್ಯ ಇಲಾಖೆ ಸಿಬ್ಬಂದಿ ಮಹಮ್ಮದ ಗುಡಗುಂಟಿ, ಪೊಲೀಸ್‌ ಸಿಬ್ಬಂದಿ ಎಚ್.ಎನ್.ಹೊಳೆಪ್ಪನವರ, ಅಬಕಾರಿ ಹೋಂ ಗಾರ್ಡ್‌ ಎಂ.ಎಂ. ಮುದ್ನೂರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ