ರಸ್ತೆ ವಿಭಜಕ್ಕೆ ಡಿಕ್ಕಿ: ಕಾರಿನಲ್ಲಿದ್ದ ಮೂವರ ಸಾವು

KannadaprabhaNewsNetwork |  
Published : Sep 02, 2026, 03:15 AM IST
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೆ ಈಡಾಗಿರುವ ಕಾರು | Kannada Prabha

ಸಾರಾಂಶ

ಎದುರಿನ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.

ಧಾರವಾಡ:

ಎದುರಿನ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.

ದಾವಣಗೆರೆ ಮೂಲದ ವಿನಾಯಕ (25), ಮಂಜುನಾಥ (29) ಹಾಗೂ ಬಸವರಾಜ (34) ಎಂಬುವರು ಮೃತಪಟ್ಟಿದ್ದು ಅಭಿಷೇಕ, ಅಜಯ್ ಹಾಗೂ ಬಸನಗೌಡ ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಕಾರು ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರು ಧಾರವಾಡದ ಚರಂತಿಮಠ ಗಾರ್ಡನ್ ಬಳಿಯ ಕೇಟರಿಂಗ್‌ವೊಂದರಲ್ಲಿ ಬಹಳ ದಿನಗಳಿಂದ ಕೆಲಸ ಮಾಡುತ್ತಿದ್ದರು. ಸೋಮವಾರ ತಡರಾತ್ರಿ ಕೆಲಸ ಮುಗಿಸಿ ಬೆಳಗಾವಿ ರಸ್ತೆಯಲ್ಲಿರುವ ಮುಲ್ಲಾ ಡಾಬಾದಲ್ಲಿ ಊಟಕ್ಕೆಂದು ಹೋಗಿದ್ದರು. ಊಟ ಮುಗಿಸಿ ಕಾರಿನಲ್ಲಿ ವಾಪಸ್‌ ಧಾರವಾಡದತ್ತ ಮರಳುತ್ತಿದ್ದಾಗ ಎದುರಿನ ಲಾರಿ ವೇಗ ಕಡಿಮೆ ಮಾಡಿದ್ದು, ಲಾರಿಗೆ ಡಿಕ್ಕಿಯಾಗುವುದನ್ನು ತಡೆಯಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದೆ. ಆಗ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಈ ಅನಾಹುತ ಉಂಟಾಗಿದೆ. ಗರಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದ ಮಾರ್ಗಸೂಚಿಯಂತೆ ಬರ ಘೋಷಣೆ: ಸಿಎಂ
ಕ್ಷೇತ್ರದಲ್ಲಿ 21 ಕೆಪಿಎಸ್ ಶಾಲೆಗಳ ಮಂಜೂರು-ಶಾಸಕ ಪಠಾಣ