ರಾಜ್ಯಮಟ್ಟದಲ್ಲಿ ಚಾಂಪಿಯನ್ ಆಗಿ ಬನ್ನಿ

KannadaprabhaNewsNetwork |  
Published : May 14, 2026, 01:15 AM IST
13ಕೆಪಿಎಲ್7:ಕೊಪ್ಪಳ ಜೆಡಿಎಸ್ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಬುಧವಾರ ಕೊಪ್ಪಳ ಜಿಲ್ಲೆಯ ಜೆಡಿಎಸ್ ತಂಡ  'ಅಂಜನಾದ್ರಿ ಫೈಟರ್ಸ್' ಜರ್ಸಿ ಅನಾವರಣಗೊಳಿಸಿದರು. | Kannada Prabha

ಸಾರಾಂಶ

ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಟ್ರೋಫಿ ಗೆಲ್ಲುವ ಮೂಲಕ ಕೊಪ್ಪಳಕ್ಕೆ ಕೀರ್ತಿ ತರಬೇಕು

ಕೊಪ್ಪಳ: ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಜನತಾ ಪ್ರೇಮಿಯರ್ ಲೀಗ್ (ಜೆಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗುವ ಮೂಲಕ ರಾಜ್ಯಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಅಂಜನಾದ್ರಿ ಫೈಟರ್ಸ್ ತಂಡದ ಆಟಗಾರರಿಗೆ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್ ಕರೆ ನೀಡಿದರು.

ನಗರದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಕೊಪ್ಪಳ ಜಿಲ್ಲೆಯ ಜೆಡಿಎಸ್ ತಂಡ ಅಂಜನಾದ್ರಿ ಫೈಟರ್ಸ್ ಜರ್ಸಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಜನ್ಮ ದಿನಾಚರಣೆ ಹಾಗೂ ಪಕ್ಷದ ರಜತ ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ಜನತಾ ಪ್ರೇಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಬೆಂಗಳೂರಿನ ಮಾದಾವರದ ನೈಸ್ ಗ್ರೌಂಡ್ ನಲ್ಲಿ ಮೇ.15, 16 ಹಾಗೂ17ರಂದು ಆಯೋಜಿಸಲಾಗಿದೆ. ಕೊಪ್ಪಳ ಸೇರಿದಂತೆ ಒಟ್ಟು 26 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಟ್ರೋಫಿ ಗೆಲ್ಲುವ ಮೂಲಕ ಕೊಪ್ಪಳಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು.

ಒಟ್ಟು 16 ಆಟಗಾರರನ್ನು ಒಳಗೊಂಡ ತಂಡ ಕೊಪ್ಪಳ ಜಿಲ್ಲಾ ಜೆಡಿಎಸ್ ಘಟಕ ಪ್ರತಿನಿಧಿಸುತ್ತಿದೆ. ಜಿಲ್ಲೆಯ ಕ್ರೀಡಾ ಘಟಕದ ಅಧ್ಯಕ್ಷ ಸೈಯದ್ ಮಹೇಮೂದ್ ಹುಸೇನಿ ಬಲ್ಲೆ ಅಂಜನಾದ್ರಿ ಫೈಟರ್ಸ್ ತಂಡದ ನಾಯಕತ್ವ ವಹಿಸಲಿದ್ದಾರೆ. ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಹಾಗೂ ಯುವ ಘಟಕಗಳು ಜಂಟಿಯಾಗಿ ಪಂದ್ಯಾವಳಿ ಆಯೋಜಿಸಿವೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಮ್ಮ ತಂಡ ಬಲಶಾಲಿಯಾಗಿದ್ದು ಚಾಂಪಿಯನ್ ಆಗುವ ವಿಶ್ವಾಸವಿದೆ ಎಂದು ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಹೇಳಿದರು.

ಸಿ.ವಿ.ಚಂದ್ರಶೇಖರ್ ನಮ್ಮ ತಂಡದ ಪ್ರಾಯೋಜಕತ್ವ ವಹಿಸಿದ್ದಾರೆ.ತಂಡದ ಎಲ್ಲ ಆಟಗಾರರು ಪಕ್ಷದ ಸದಸ್ಯತ್ವ ಪಡೆದಿದ್ದಾರೆ.ಟ್ರೋಫಿ ಮತ್ತು ₹5 ಲಕ್ಷ ನಗದು ಪುರಸ್ಕಾರ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮುತ್ತೇವೆ.ಆ ಮೂಲಕ ಯುವಕರನ್ನು ದೊಡ್ಡ ಪ್ರಮಾಣದಲ್ಲಿ ಪಕ್ಷಕ್ಕೆ ಆಕರ್ಷಿಸುತ್ತೇವೆ ಎಂದು ಸೈಯದ್ ಮಹೇಮೂದ್ ಹುಸೇನಿ ಬಲ್ಲೆ ಹೇಳಿದರು.

ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಅಹಮದ್, ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ನಗರ ಘಟಕ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಕೋಲ್ಕಾರ್, ತಾಲೂಕು ಎಸ್ಸಿ ಘಟಕದ ಅಧ್ಯಕ್ಷ ಸುರೇಶ ದದೇಗಲ್, ತಾಲೂಕು ಎಸ್ ಟಿ ಘಟಕದ ಅಧ್ಯಕ್ಷ ಮಲ್ಲಪ್ಪ ಹಂದ್ರಾಳ, ಜಿಲ್ಲಾ ಖಜಾಂಚಿ ಮೌನೇಶ್ ಕಿನ್ನಾಳ, ದ್ಯಾಮಣ್ಣ ಕಲಕೇರಿ, ಮುತ್ತಣ್ಣ ಕಲಕೇರಿ, ರೋಹಿತ್ ಹಣವಾಳ, ಕಲಿಲ್ ಮಾನ್ವಿ ಹಾಗೂ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ: ಗಡ್ಡಿ- ಬಂಡ್ರಾಳ್ ಗ್ರಾಮಸ್ಥರ ಪ್ರತಿಭಟನೆ
ಕಾಳನದಿ ದಡದಲ್ಲಿ ಮರಿ ಕಾವಲು ಕಾಯುತ್ತಿರುವ ಮೊಸಳೆಯಮ್ಮ