ಧಾರವಾಡ:
ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಭಾಂಗಣದಲ್ಲಿ ಮಂಗಳವಾರ ನಡೆದ ಸಂವಹನ ಕೂಟದ ಸಮಾರೋಪ, ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ, ಶಿಕ್ಷಕರಿಗೆ ಸನ್ಮಾನ ಹಾಗೂ ''''''''ಮಾಧ್ಯಮ ಮತ್ತು ಕಾನೂನು'''''''' ಗ್ರಂಥ ಬಿಡುಗಡೆಯಲ್ಲಿ ಮಾತನಾಡಿದ ಅವರು, ಬದಲಾದ ಪತ್ರಿಕೋದ್ಯಮಕ್ಕೆ ತಕ್ಕಂತೆ ಮಾಧ್ಯಮದ ವಿದ್ಯಾರ್ಥಿಗಳು ಕೌಶಲಗಳನ್ನು ಕಲಿಯಬೇಕು ಎಂದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಹೊಸತನ ತಿಳಿದುಕೊಳ್ಳವ ಕುತೂಹಲ ಇರಬೇಕು. ನಿರಂತರ ಅಧ್ಯಯನ ಶೀಲರಾಗಬೇಕು. ಸಾಮಾಜಿಕ ಸೌಹಾರ್ದತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳನ್ನು ಸದಭಿರುಚಿಯ ಹವ್ಯಾಸ ಬಿಂಬಿಸಲು ಬಳಸಿಕೊಳ್ಳಬೇಕು ಎಂದರು.ಹಿರಿಯ ಪ್ರಾಧ್ಯಾಪಕ ಪ್ರೊ. ಜೆ.ಎಂ. ಚಂದುನವರ, ಮಾಧ್ಯಮದ ವಿದ್ಯಾರ್ಥಿಗಳು ಸ್ವಯಂ ಶಿಸ್ತು, ಸಮಯಕ್ಕೆ ಹೆಚ್ಚು ಮಹತ್ವ ನೀಡಬೇಕು. ಮಾಧ್ಯಮ ವೃತ್ತಿಪರತೆಯನ್ನು ರೂಢಿಸಿಕೊಳ್ಳಬೇಕು. ಸದಾ ಚಲನಶೀಲತೆ ಬೆಳೆಸಿಕೊಂಡು ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬೇಕು. ಮಾಧ್ಯಮದ ವಿದ್ಯಾರ್ಥಿಗಳು ಸುತ್ತಮುತ್ತಲಿನ ವಿದ್ಯಮಾನಗಳನ್ನು ಅವಲೋಕಿಸಬೇಕು ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ಪದವಿ ಕಾಲೇಜಿನ ಪತ್ರಿಕೋದ್ಯಮ ಪ್ರಾಧ್ಯಾಪಕರಾದ ಮಹಾಂತ ಕಾಲೇಜಿನ ಪ್ರೊ. ಜಯಲಕ್ಷ್ಮಿ ಯಂಡಿಗೇರಿ, ಕರ್ನಾಟಕ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಭಾಕರ ಕಾಂಬಳೆ ಮತ್ತು ಹುಬ್ಬಳ್ಳಿಯ ಶ್ರೀ ಕಾಡಸಿದ್ದೇಶ್ವರ ಕಾಲೇಜಿನ ಉಪನ್ಯಾಸಕಿ ಅಶ್ವಿನಿ ಬಡಿಗೇರ ಅವರನ್ನು ಸನ್ಮಾನಿಸಲಾಯಿತು. ಡಾ. ವಿಶ್ವನಾಥ ಚಿಂತಾಮಣಿ, ಡಾ. ಮಂಜುನಾಥ ಅಡಿಗಲ್, ಡಾ. ನಾಗರಾಜ ರೋಣದ, ಪ್ರೊ. ಅಶ್ವಿನಿ ಬಡಿಗೇರ ಇದ್ದರು.