ಭವಿಷ್ಯ ರೂಪಿಸಿಕೊಳ್ಳಲು ಪಠ್ಯೇತರವೂ ಸಹಕಾರಿ: ಮಿಮಿಕ್ರಿ ಗೋಪಿ

KannadaprabhaNewsNetwork |  
Published : Mar 31, 2024, 02:00 AM ISTUpdated : Mar 31, 2024, 02:01 AM IST
36 | Kannada Prabha

ಸಾರಾಂಶ

ಶ್ರೇಷ್ಟದಲ್ಲಿ 11 ಸ್ಪರ್ಧೆಗಳನ್ನು ಆಯೋಜಿಸಿಲಾಗಿದ್ದು ಮೈಸೂರು, ಮಂಡ್ಯ ಮತ್ತು ಕೊಡಗು ಸುಮಾರು 28 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಾಗೂ ಕ್ರಿಕೆಟ್ ಪಂದ್ಯಾವಳಿಗೆ 32 ತಂಡಗಳು ಭಾಗವಹಿಸಿದ್ದವು.

ಕನ್ನಡಪ್ರಭ ವಾರ್ತೆ ಮೈಸೂರು

ಪಠ್ಯೇತರ ಚಟುವಟಿಕೆಗಳು ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿ ಎಂದು ಹಾಸ್ಯ ಕಲಾವಿದ ಮಿಮಿಕ್ರಿ ಗೋಪಿ ಹೇಳಿದರು.

ನಗರದ ಹೆಬ್ಬಾಳ್ ಹೊರ ವರ್ತುಲ ರಸ್ತೆಯಲ್ಲಿರುವ ಶೇಷಾದ್ರಿಪುರಂ ಪದವಿ ಕಾಲೇಜಿನ ವತಿಯಿಂದ ಶ್ರೇಷ್ಠ-2024 ರಾಜ್ಯಮಟ್ಟದ ಐಟಿ, ಮ್ಯಾನೇಜ್ಮೆಂಟ್, ಕಲ್ಚರಲ್ ಮತ್ತು ಸ್ಪೋರ್ಟ್ಸ್ ಫೆಸ್ಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪುಸ್ತಕವನ್ನು ಆಶ್ರಯಿಸಬಾರದು, ಸಹ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ಇವುಗಳು ತಮಗೆ ಅನೇಕ ಕ್ಷೇತ್ರಗಳಲ್ಲಿ ಅವಕಾಶವನ್ನು ನೀಡಿ ಭವಿಷ್ಯ ರೂಪಿಸಿಕೊಳ್ಳಲು ದಾರಿಯಾಗುತ್ತವೆ ಎಂದರು.

ಶೇಷಾದ್ರಿಪುರಂ ಕಾಲೇಜಿನಲ್ಲಿ ಅನೇಕ ಸ್ಪರ್ಧೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ ಪ್ರತಿಭೆಗೊಂದು ವೇದಿಕೆ ಕಲ್ಪಿಸಲಾಗಿದೆ. ಇಲ್ಲಿ ಆಯೋಜಿಸಿರುವ ಎಲ್ಲ ಸ್ಪರ್ಧಾ ಕಾರ್ಯಕ್ರಮಗಳು ಪಠ್ಯೇತರ ಮತ್ತು ಸಹ ಪಠ್ಯೇತರ ವಿಷಯಗಳಿಗೆ ಸಂಬಂಧಿಸಿದವುಗಳಾಗಿವೆ. ರಾಜ್ಯಮಟ್ಟದ ಫೆಸ್ಟ್ ನಲ್ಲಿ ಭಾಗವಹಿಸಲು ವಿವಿಧ ಸ್ಥಳಗಳಿಂದ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಿರುವಿರಿ. ತಮಗೆಲ್ಲ ಶುಭವಾಗಲಿ ಎಂದು ಅವರು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಪ್ರೊ.ಕೆ. ಸೌಮ್ಯಾ ಈರಪ್ಪ ಮಾತನಾಡಿ, ಸ್ಪರ್ಧಾರ್ಥಿಗಳಿಗೆ ಶುಭ ಹಾರೈಸಿದರು.

ಅತಿಥಿಗಳಾಗಿ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಎನ್. ಅರ್ಚನಾ ಸ್ವಾಮಿ, ಫೆಸ್ಟ್ ಅಧ್ಯಾಪಕ ಸಂಯೋಜಕ ಶ್ರೀದೇವಿ ಎನ್. ಪ್ರಭು, ವೈ.ಆರ್. ರುದ್ರೇಶ್, ವಿದ್ಯಾರ್ಥಿ ಮುಖಂಡರಾದ ಅಧ್ಯಕ್ಷ ಎಸ್. ಸುಮಂತ್ , ಕಾರ್ಯದರ್ಶಿ ಎ. ದೃಶಸ್ಡಿ, ಸಾಂಸ್ಕೃತಿಕ ಕಾರ್ಯದರ್ಶಿ ಎಂ. ಶಿವಪ್ರಸಾದ್, ಕ್ರೀಡಾ ಕಾರ್ಯದರ್ಶಿ ಬಿ.ಎಂ. ಸಾಗರ್, ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಹಾಗೂ ವಿವಿಧ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಇದ್ದರು.

ಶ್ರೇಷ್ಟದಲ್ಲಿ 11 ಸ್ಪರ್ಧೆಗಳನ್ನು ಆಯೋಜಿಸಿಲಾಗಿದ್ದು ಮೈಸೂರು, ಮಂಡ್ಯ ಮತ್ತು ಕೊಡಗು ಸುಮಾರು 28 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಾಗೂ ಕ್ರಿಕೆಟ್ ಪಂದ್ಯಾವಳಿಗೆ 32 ತಂಡಗಳು ಭಾಗವಹಿಸಿದ್ದವು. ಕಾಲೇಜಿನ ಎಲ್ಲ ಅಧ್ಯಾಪಕರು ಹಾಗೂ ಕಾರ್ಯಕ್ರಮದ ಆಯೋಜಕರಾದ ವಿದ್ಯಾರ್ಥಿ ವೃಂದದವರು ಲವಲವಿಕೆಯಿಂದ ಭಾಗವಹಿಸಿದ್ದರು.

ಸ್ಪರ್ಧೆಗಳಲ್ಲಿ ಭಾಗವಹಿಸಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಕೆ. ಸೌಮ್ಯಈರಪ್ಪ ಹಾಗೂ ಎಲ್ಲ ಅಧ್ಯಾಪಕ ವೃಂದದವರು ನೆರವೇರಿಸಿದರು. ಐಟಿ ಪರ್ಯಾಯ ಪಾರಿತೋಷಕ ಪ್ರಶಸ್ತಿಯನ್ನು ಮೈಕಾ ಕಾಲೇಜು, ಮ್ಯಾನೇಜ್‌ಮೆಂಟ್ ಪರ್ಯಾಯ ಪಾರಿತೋಷಕ ಪ್ರಶಸ್ತಿಯನ್ನು ಸೇಪಿಯಂಟ್ ಕಾಲೇಜು, ಕ್ರೀಡಾ ಪರ್ಯಾಯ ಪಾರಿತೋಷಕ ಪ್ರಶಸ್ತಿಯನ್ನು ಪಿಜಿಎಸ್ಸಿ ಮಾನಸಗಂಗೋತ್ರಿ, ಮೈಸೂರು ಕಾಲೇಜು, ಸಾಂಸ್ಕೃತಿಕ ಪರ್ಯಾಯ ಪಾರಿತೋಷಕ ಪ್ರಶಸ್ತಿಯನ್ನು ಮಹಾರಾಣಿ ವಿಜ್ಞಾನ ಕಾಲೇಜು ಪಡೆದುಕೊಂಡರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ