ಇಂದು ಸಂಸ್ಮರಣೆ, ಗುರುವಂದನೆ ಕಾರ್ಯಕ್ರಮ: ಎಚ್‌.ಟಿ.ಮಂಜು

KannadaprabhaNewsNetwork |  
Published : Feb 10, 2026, 01:45 AM IST
9ಕೆಎಂಎನ್‌ಡಿ-11ಕೆ.ಆರ್‌.ಪೇಟೆ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಸಕ ಹೆಚ್.ಟಿ.ಮಂಜು ಗುರುವಂದನಾ ಕಾರ್ಯಕ್ರಮದ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಭೈರವೈಕ್ಯ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಸಂಸ್ಮರಣೆ ಮತ್ತು ಹಾಲಿ ಪೀಠಾಧಿಪತಿ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಅವರ ಗುರವಂದನೆ ಕಾರ್ಯಕ್ರಮ ಫೆ.10ರಂದು ಪಟ್ಟಣದ ಟಿಎಪಿಸಿಎಂಎಸ್ ಸಮುದಾಯಭವನದ ಆವರಣದಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಭೈರವೈಕ್ಯ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಸಂಸ್ಮರಣೆ ಮತ್ತು ಹಾಲಿ ಪೀಠಾಧಿಪತಿ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಅವರ ಗುರವಂದನೆ ಕಾರ್ಯಕ್ರಮ ಫೆ.10ರಂದು ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆಯಲ್ಲಿ ಪಟ್ಟಣದ ಟಿಎಪಿಸಿಎಂಎಸ್ ಸಮುದಾಯಭವನದ ಆವರಣದಲ್ಲಿ ನಡೆಯಲಿದೆ ಎಂದು ಸೋಮವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕರು ತಿಳಿಸಿದರು.

ನಿವೃತ್ತ ಮುಖ್ಯ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸುವರು. ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಬಗ್ಗೆ ಅಭಿನಂದನಾ ಗ್ರಂಥವೊಂದನ್ನು ಸಂಪಾದಿಸಿರುವ ಲೇಖಕ ಬಿ.ಎಚ್.ಸುರೇಶ್ ಭೈರವೈಕ್ಯ ಚಂದ್ರಶೇಖರನಾಥ ಸ್ವಾಮೀಜಿಗಳ ಪುಣ್ಯಸ್ಮರಣೆ ಮಾಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್‌ಗೌಡ ಅಭಿನಂದನಾ ನುಡಿಗಳನ್ನಾಡುವರು ಎಂದರು.

ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಎಂ.ಪುಟ್ಟಸ್ವಾಮಿಗೌಡ, ರಾಜ್ಯ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ವಿಜಯರಾಮೇಗೌಡ, ಆರ್‌ಟಿಒ ಮಲ್ಲಿಕಾರ್ಜುನ್, ಮನ್‌ಮುಲ್ ನಿರ್ದೇಶಕರಾದ ಡಾಲು ರವಿ, ಎಂ.ಬಿ.ಹರೀಶ್, ರಾಜ್ಯ ಮಾರಾಟ ಮಹಾ ಮಂಡಳಿ ನಿರ್ದೇಶಕ ಎಸ್.ಎಲ್.ಮೋಹನ್, ರಾಜ್ಯ ಕೈಗಾರಿಕಾ ಸರಬರಾಜು ಮತ್ತು ಮಾರಟ ಮಹಾಂಡಲಿಯ ಅಧ್ಯಕ್ಷ ಕೆ.ಎಸ್.ಸಂತೋಷ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಶ್, ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು ಇತರರು ಭಾಗವಹಿಸುವರು ಎಂದರು.

ಪಟ್ಟಣದ ಪ್ರವಾಸಿಮಂದಿರದ ಆವರಣದಿಂದ ಡಾ.ನಿಶ್ಚಲಾನಂದನಾಥ ಶ್ರೀಗಳನ್ನು ತಾಲೂಕಿನ ಸಮಸ್ತ ಜನತೆಯ ಪರವಾಗಿ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನದೊಂದಿಗೆ ಮೆರವಣಿಗೆಯ ಮೂಲಕ ಟಿ.ಎ.ಪಿ.ಸಿ.ಎಂ.ಎಸ್ ಆವರಣದ ವೇದಿಕೆಗೆ ಕರೆತರಲಾಗುವುದು ಎಂದು ನುಡಿದರು.ಇದೇ ವೇಳೆ ಗುರುವಂದನಾ ಕಾರ್ಯಕ್ರಮದ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಆರ್‌ಟಿಒ ಮಲ್ಲಿಕಾರ್ಜುನ್, ಟಿಎಪಿಸಿಎಂಎಸ್ ಅಧ್ಯಕ್ಷ ತೆರ್ನೇನಹಳ್ಳಿ ಟಿ.ಬಲದೇವ್, ತಾ.ಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್. ಬೂಕನಕೆರೆ ಹಳವೇಗೌಡ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೋಟದ ಕಾರ್ಮಿಕರ ಮೇಲೆ ಚಿರತೆ ದಾಳಿ
ಕನ್ನಡ ಭಾಷಾ ನೀತಿಯ ಅನುಷ್ಠಾನಕ್ಕೆ ವಿಶೇಷ ಕ್ರಮ: ಡಿಸಿ ಪ್ರಭುಲಿಂಗ ಕವಳಿಕಟ್ಟಿ