ಕನ್ನಡಪ್ರಭ ವಾರ್ತೆ ಮಣಿಪಾಲ
ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ, ದೇಶ ವಿಭಜನೆಯ ಸಂದರ್ಭದಲ್ಲಾದ ದುರಂತ ಘಟನೆಗಳನ್ನು ನೆನಪಿಸಿಕೊಳ್ಳಬೇಕಾದ ಔಚಿತ್ಯದ ಕುರಿತು ಮಾತನಾಡಿದರು.
ಉಪಕುಲಪತಿ ಲೆ. ಜ. (ಡಾ.) ಎಂ.ಡಿ. ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ದೇಶವಿಭಜನೆಯ ಘಟನೆಯು ಭಾರತದ ಚರಿತ್ರೆಯನ್ನು ಹೇಗೆ ಪ್ರಭಾವಿಸಿತು ಎಂಬುದರ ಬಗ್ಗೆ ಮಾತನಾಡಿದರು.ಕ್ಯಾಂಪಸ್ ಸುರಕ್ಷಾ ವಿಭಾಗದ ಮುಖ್ಯಸ್ಥ ಕರ್ನಲ್ ವಿಜಯ ಭಾಸ್ಕರ ರೆಡ್ಡಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ದೇಶ ವಿಭಜನೆಯಂಥ ಕರಾಳ ಘಟನೆಗಳು ಮತ್ತೆ ಮರುಕಳಿಸಿದಂತೆ ನೋಡಿಕೊಳ್ಳಬೇಕಾದ ಅವಶ್ಯಕತೆಯ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ದೇಶವಿಭಜನೆಯ ಕರಾಳತೆಯನ್ನು ಬಿಂಬಿಸುವ ಛಾಯಾಚಿತ್ರಗಳ ಪ್ರದರ್ಶನ ಆಯೋಜನೆಗೊಂಡಿದ್ದು, ಇದು ಅಂದಿನ ಚಾರಿತ್ರಿಕ ಘಟನೆಯಲ್ಲಿ ಜನರು ಸಂಕಷ್ಟವನ್ನು ಅನುಭವಿಸಿದ ದಿನಗಳನ್ನು ನೆನಪುಮಾಡಿಕೊಟ್ಟಿತು. ಮಾಹೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕರು, ಸಿಬ್ಬಂದಿ, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.