ನ. 4ರಂದು ವಿರೂಪಾಕ್ಷಲಿಂಗ ಶಿವಾಚಾರ್ಯರ ಪುಣ್ಯಸ್ಮರಣೋತ್ಸವ

KannadaprabhaNewsNetwork |  
Published : Sep 24, 2026, 02:30 AM IST
ಕುಷ್ಟಗಿ ತಾಲೂಕಿನ ಚಳಗೇರಿ ಮಠದಲ್ಲಿ ವಿರೂಪಾಕ್ಷಲಿಂಗ ಶಿವಾಚಾರ್ಯರ ಪುಣ್ಯಸ್ಮರಣೋತ್ಸವ, ರಥ ಉದ್ಘಾಟನೆಯ ಪೂರ್ವಭಾವಿ ಸಭೆ ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದ ಶ್ರೀಮಠದಲ್ಲಿ ಶ್ರೀ ವೀರಭದ್ರೇಶ್ವರ ಜಯಂತಿ, ಮಹಾತಪಸ್ವಿ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ 12ನೇ ಪುಣ್ಯಸ್ಮರಣೋತ್ಸವ, ನೂತನವಾಗಿ ನಿರ್ಮಿಸಿರುವ ರಥದ ಉದ್ಘಾಟನೆ, ಜಾತ್ರಾ ಮಹೋತ್ಸವವನ್ನು ನ. 4ರಂದು ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಕುಷ್ಟಗಿ: ತಾಲೂಕಿನ ಚಳಗೇರಿ ಗ್ರಾಮದ ಶ್ರೀಮಠದಲ್ಲಿ ಶ್ರೀ ವೀರಭದ್ರೇಶ್ವರ ಜಯಂತಿ, ಮಹಾತಪಸ್ವಿ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ 12ನೇ ಪುಣ್ಯಸ್ಮರಣೋತ್ಸವ, ನೂತನವಾಗಿ ನಿರ್ಮಿಸಿರುವ ರಥದ ಉದ್ಘಾಟನೆ, ಜಾತ್ರಾ ಮಹೋತ್ಸವವನ್ನು ನ. 4ರಂದು ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಕ್ತರಿಗೆ ಅಗತ್ಯ ಸೌಲಭ್ಯ, ವ್ಯವಸ್ಥೆ ಹಾಗೂ ಕಾರ್ಯಕ್ರಮಗಳ ಯಶಸ್ವಿ ಆಯೋಜನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ವಿವಿಧ ಗ್ರಾಮಗಳ ಭಕ್ತರು ಹಾಗೂ ಶ್ರೀಮಠದ ಸದ್ಭಕ್ತರು ಸಭೆಯಲ್ಲಿ ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು.

ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕುಕನೂರಿನ ಮಹಾದೇವ ಮಹಾಸ್ವಾಮಿಗಳು ಸಭೆಯ ಸಾನ್ನಿಧ್ಯ ವಹಿಸಿದ್ದರು. ಜಾತ್ರಾ ಮಹೋತ್ಸವವನ್ನು ಭಕ್ತಿ-ಭಾವ, ಶ್ರದ್ಧೆ ಹಾಗೂ ಸೌಹಾರ್ದದಿಂದ ನಡೆಸಲು ಎಲ್ಲರೂ ಸಹಕಾರ ನೀಡಬೇಕು ಎಂದು ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಕೋರಿದರು.

ಶಾಸಕ ದೊಡ್ಡನಗೌಡ ಪಾಟೀಲ, ದೊಡ್ಡಬಸವನಗೌಡ ಪಾಟೀಲ ಬಯ್ಯಾಪುರ, ಮಾಜಿ ಶಾಸಕ ಕೆ. ಶರಣಪ್ಪ ವಕೀಲರು, ಎಸ್.ಆರ್. ನವಲಿ ಹಿರೇಮಠ, ಹಿರಿಯ ಕಾನೂನು ಅಧಿಕಾರಿ ಬಿ.ಎಸ್. ಪಾಟೀಲ ಉಪಸ್ಥಿತರಿದ್ದರು.

ರಥೋತ್ಸವ ಸಮಿತಿ ರಚನೆ: ನೂತನ ರಥೋತ್ಸವದ ಕಾರ್ಯಕ್ರಮಗಳ ನಿರ್ವಹಣೆಗಾಗಿ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸಂಸದ ರಾಜಶೇಖರ ಹಿಟ್ನಾಳ, ಅಧ್ಯಕ್ಷರಾಗಿ ಶಾಸಕ ದೊಡ್ಡನಗೌಡ ಪಾಟೀಲ, ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ, ಉಪಾಧ್ಯಕ್ಷರಾಗಿ ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಹಾಗೂ ಹಸನಸಾಬ ದೋಟಿಹಾಳ ಅವರನ್ನು ನೇಮಕ ಮಾಡಲಾಯಿತು.

ಕಾರ್ಯದರ್ಶಿಯಾಗಿ ಎಸ್.ಆರ್. ನವಲಿ ಹಿರೇಮಠ, ಸಹಕಾರ್ಯದರ್ಶಿಯಾಗಿ ಹಿರಿಯ ಕಾನೂನು ಅಧಿಕಾರಿ ಬಿ.ಎಸ್. ಪಾಟೀಲ ಅವರನ್ನು ನೇಮಕ ಮಾಡಲಾಗಿದ್ದು, ಇತರರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆ-ಬೆಳೆ ಸಮೃದ್ಧಿಗೆ ಜೋಕುಮಾರನ ಆರಾಧನೆ
ಹೊಸ ಯೋಚನೆಗಳ ಹರಿಕಾರ ಚಿದಂಬರರಾವ್‌ ಜಂಬೆ