ಶಿವಕುಮಾರ ಮಹಾಶಿವಯೋಗಿಗಳ ಪುಣ್ಯಸಂಸ್ಮರಣೋತ್ಸವ

KannadaprabhaNewsNetwork |  
Published : Jan 31, 2026, 01:45 AM IST
30ಎಚ್ಎಸ್ಎನ್15:  | Kannada Prabha

ಸಾರಾಂಶ

“ನಡೆದಾಡುವ ದೇವರು” ಎಂದೇ ಖ್ಯಾತರಾದ ಡಾ. ಶಿವಕುಮಾರ ಮಹಾಶಿವಯೋಗಿಗಳು, ಶ್ರೀ ಸಿದ್ಧಗಂಗಾ ಮಠ ಇವರ 7ನೇ ವರ್ಷದ ಪುಣ್ಯಸಂಸ್ಮರಣೋತ್ಸವವನ್ನು ಫೆಬ್ರವರಿ 2ರ ಸೋಮವಾರ ನಗರದ ಮಹಾವೀರ ವೃತ್ತದಲ್ಲಿ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ ಎಂದು ವೀರಶೈವ ಲಿಂಗಾಯತ ವೇದಿಕೆ ರಾಜ್ಯ ಸಮಿತಿ ಸದಸ್ಯ ಬಿ.ಆರ್. ವಸಂತ ಕುಮಾರ್ ತಿಳಿಸಿದರು. ಕಾರ್ಯಕ್ರಮದಲ್ಲಿ ಅರಕಲಗೂಡು, ಹಾಸನ, ಹಳೆಬೀಡು, ನುಗ್ಗೆಹಳ್ಳಿ, ತೇಜೂರು, ಕೊಡ್ಲಿಪೇಟೆ, ಶನಿವಾರಸಂತೆ, ಹೊಳೆನರಸೀಪುರ ಸೇರಿದಂತೆ ವಿವಿಧ ಕ್ಷೇತ್ರಗಳ ಅನೇಕ ಮಠಾಧೀಶರು, ಶಿವಾಚಾರ್ಯ ಸ್ವಾಮೀಜಿಗಳು, ಶರಣರು ಹಾಗೂ ಧಾರ್ಮಿಕ ನಾಯಕರು ದಿವ್ಯ ಸಮ್ಮುಖದಲ್ಲಿರಲಿದ್ದಾರೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಶತಮಾನದ ಸಂತ, “ನಡೆಯಾಡುವ ದೇವರು” ಎಂದೇ ಖ್ಯಾತರಾದ ಡಾ. ಶಿವಕುಮಾರ ಮಹಾಶಿವಯೋಗಿಗಳು, ಶ್ರೀ ಸಿದ್ಧಗಂಗಾ ಮಠ ಇವರ 7ನೇ ವರ್ಷದ ಪುಣ್ಯಸಂಸ್ಮರಣೋತ್ಸವವನ್ನು ಫೆಬ್ರವರಿ 2ರ ಸೋಮವಾರ ನಗರದ ಮಹಾವೀರ ವೃತ್ತದಲ್ಲಿ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ ಎಂದು ವೀರಶೈವ ಲಿಂಗಾಯತ ವೇದಿಕೆ ರಾಜ್ಯ ಸಮಿತಿ ಸದಸ್ಯ ಬಿ.ಆರ್. ವಸಂತ ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಸೋಮವಾರ ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಈ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ವೀರಶೈವ ಲಿಂಗಾಯಿತ ಮಹಾವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಹಾಗೂ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಜೊತೆಗೆ ಶ್ರೀ ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮಿಗಳು ದಿವ್ಯ ಸಮ್ಮುಖದಲ್ಲಿರಲಿದ್ದಾರೆ ಎಂದರು. ಘನ ಉಪಸ್ಥಿತಿಯಾಗಿ ಮೈಸೂರು ರಾಜವಂಶಸ್ಥರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌, ವೀರಶೈವ ಲಿಂಗಾಯತ ಮಹಾವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಕಲ್ಲೂರ್‌, ಕರುನಾಡ ವಿಜಯಸೇನೆಯ ರಾಜ್ಯಾಧ್ಯಕ್ಷರಾದ ಹ.ನೀ. ದೀಪಕ್, ಬಿಜೆಪಿ ಮುಖಂಡ ಪುನೀತ್ ಬನ್ನಹಳ್ಳಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅರಕಲಗೂಡು, ಹಾಸನ, ಹಳೆಬೀಡು, ನುಗ್ಗೆಹಳ್ಳಿ, ತೇಜೂರು, ಕೊಡ್ಲಿಪೇಟೆ, ಶನಿವಾರಸಂತೆ, ಹೊಳೆನರಸೀಪುರ ಸೇರಿದಂತೆ ವಿವಿಧ ಕ್ಷೇತ್ರಗಳ ಅನೇಕ ಮಠಾಧೀಶರು, ಶಿವಾಚಾರ್ಯ ಸ್ವಾಮೀಜಿಗಳು, ಶರಣರು ಹಾಗೂ ಧಾರ್ಮಿಕ ನಾಯಕರು ದಿವ್ಯ ಸಮ್ಮುಖದಲ್ಲಿರಲಿದ್ದಾರೆ ಎಂದು ಹೇಳಿದರು.

ಇದಲ್ಲದೆ ರಾಜಕೀಯ, ಸಾಮಾಜಿಕ, ಕಾನೂನು, ಉದ್ಯಮ ಕ್ಷೇತ್ರದ ಗಣ್ಯರು, ಸಂಘಟನೆಗಳ ಮುಖಂಡರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ದಾಸೋಹ, ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳ ಮೂಲಕ ಸಮಾಜಕ್ಕೆ ದಿಕ್ಕು ತೋರಿದ ಡಾ. ಶಿವಕುಮಾರ ಮಹಾಶಿವಯೋಗಿಗಳ ಆದರ್ಶಗಳನ್ನು ಸ್ಮರಿಸುವುದು ಈ ಪುಣ್ಯಸ್ಮರಣೆಯ ಉದ್ದೇಶವಾಗಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್‌, ಪ್ರಸನ್ನಕುಮಾರ್‌, ಅವಿನಾಶ್, ದೇವರಾಜು ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟಿಬಿ ಗೇಟ್‌ ಬದಲಿಸಲು ಹಣ ಕೊಡಿ : ಬಿವೈವಿ
ರಾಯ್‌ ಸಾವಿಗೆ ಐ.ಟಿ. ಕಿರುಕುಳ ಕಾರಣ : ಬಾಬು