ಕುಡಿಯುವ ನೀರು ಯೋಜನೆ ಕಾಮಗಾರಿಗಳ ಆರಂಭಿಸಿ

KannadaprabhaNewsNetwork |  
Published : Mar 20, 2024, 01:24 AM IST
 ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಭದ್ರಾವತಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ  ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಾದ ಕೆ. ನಾಗೇಂದ್ರ ಪ್ರಸಾದ್ ಅವರಿಗೆಮನವಿ ಸಲ್ಲಿಸಲಾಗಿದೆ. | Kannada Prabha

ಸಾರಾಂಶ

ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಭದ್ರಾವತಿಯಲ್ಲಿ ಮನವಿ ಸಲ್ಲಿಸಲಾಯಿತು.

ಭದ್ರಾವತಿ: ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನ ಉಂಬ್ಳೆಬೈಲು ಹಾಗೂ ಕಲ್ಲಹಳ್ಳಿ ಸೇರಿದಂತೆ ೨೮ ಗ್ರಾಮಗಳ ಒಳಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ದೊಣಬಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗೂ ಸಿಂಗನಮನೆ ಗ್ರಾಮದ ಏಕಗ್ರಾಮ ಕುಡಿಯುವ ನೀರಿನ ಯೋಜನೆಯ ಪುನಶ್ವೇತನ ಕಾಮಗಾರಿ ಮತ್ತು ಕಂಬದಾಳು ಹೊಸೂರು ಸೇರಿದಂತೆ ೨೧ ಗ್ರಾಮಗಳ ಒಳಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿ ಹಾಗೂ ಕೂಡ್ಲಿಗೆರೆ, ಬಾರಂದೂರು ಗ್ರಾಪಂ ವ್ಯಾಪ್ತಿಯ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ.

ಪ್ರಸ್ತುತ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕಾಮಗಾರಿ ಆರಂಭಿಸುವಂತೆ ಅಧ್ಯಕ್ಷ ಆರ್.ವೇಣುಗೋಪಾಲ ಮನವಿಯಲ್ಲಿ ಒತ್ತಾಯಿಸಿದ್ದಾರೆ.

- - - -ಡಿ18-ಬಿಡಿವಿಟಿ2:

ಇಲಾಖೆ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಅವರಿಗೆ ಅಧ್ಯಕ್ಷ ಆರ್.ವೇಣುಗೋಪಾಲ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?