ಕನ್ನಡಪ್ರಭ ವಾರ್ತೆ ಮೈಸೂರು
ವಿವಿಯಿಂದ ಕೆಲವೊಂದಷ್ಟು ಕೆಲಸ ಬಾಕಿ ಇದೆ. ಅದು ಪೂರ್ಣಗೊಂಡರೆ ಜೂನ್ 24ರಂದು ಆರಂಭವಾಗಲಿದೆ ಎಂದು ವಿಟಿಯು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ್ ತಿಳಿಸಿದರು.
ಸಾತಗಳ್ಳಿಯ ವಿಟಿಯು ಪ್ರಾದೇಶಿಕ ಕಚೇರಿಯಲ್ಲಿ ಶನಿವಾರ ಕುವೆಂಪು ಮಲ್ಟಿಮೀಡಿಯಾ ಸೆಂಟರ್ ಹಾಗೂ ಭೌತಶಾಸ್ತ್ರ, ರಸಾಯನಶಾಸ್ತ್ರ, ಎಂಬಿಎ ವಿಭಾಗದ ಡಿಜಿಟಲ್ ಮಾರ್ಕೆಟಿಂಗ್ ಪ್ರಯೋಗಾಲಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಟಿಯು ವತಿಯಿಂದ ಸಂಶೋಧನೆ ಮತ್ತು ಆಡಳಿತಾತ್ಮಕ ಅಭಿವೃದ್ಧಿಗೆ ಮಹತ್ವ ನೀಡಲಾಗುತ್ತಿದೆ. ಉತ್ತಮ ದೂರದೃಷ್ಟಿಯುಳ್ಳವರ ನೇತೃತ್ವದಲ್ಲಿ ನಾಲ್ಕು ಸಂಶೋಧನಾ ಕ್ಲಸ್ಟರ್ಆರಂಭಿಸಲಾಗುವುದು. ಕಂಪ್ಯೂಟರ್ಸೈನ್ಸ್, ಮೆಕಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ ವಿಭಾಗದಲ್ಲಿ ಕ್ಲಸ್ಟರ್ ಆರಂಭವಾಗಲಿದ್ದು, ಜೂ. 15ರಂದು ಅನುಮತಿ ದೊರೆಯಲಿದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ವಾಟ್ಸ್ ಆಪ್ನಲ್ಲಿಯೇ ಫಲಿತಾಂಶ ನೋಡಬಹುದು. ವಿವಿಯು ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 52ನೇ ಸ್ಥಾನ, ವಿವಿಗಳ ಪೈಕಿ 63, ಮ್ಯಾನೇಜ್ ಮೆಂಟ್ ಅಧ್ಯಯನದಲ್ಲಿ 95, ಒಟ್ಟಾರೆ ರ್ಯಾಂಕಿಂಗ್ ನಲ್ಲಿ 93ನೇ ಸ್ಥಾನದಲ್ಲಿದೆ. ಈ ವರ್ಷ ಎಂಜಿನಿಯರಿಂಗ್ವಿಭಾಗದಲ್ಲಿ 30ರೊಳಗೆ ರ್ಯಾಂಕಿಂಗ್ ತರುವ ಉದ್ದೇಶ ಹೊಂದಿದ್ದೇವೆ ಎಂದರು.
ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ವಿಟಿಯು ಕುಲಸಚಿವ ಬಿ.ಇ. ರಂಗಸ್ವಾಮಿ, ಪರೀಕ್ಷಾಂಗ ಕುಲಸಚಿವ ಟಿ.ಎಸ್. ಶ್ರೀನಿವಾಸ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ಪ್ರಾದೇಶಿಕ ಕಚೇರಿ ನಿರ್ದೇಶಕ ಟಿ.ಪಿ. ರೇಣುಕಾಮೂರ್ತಿ ಇದ್ದರು.